ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ: ಓಂ ಬಿರ್ಲಾ ಬಗ್ಗೆ ಮೋದಿ ಹೇಳಿದ್ದಿಷ್ಟು

Updated on: Mar 07, 2026 | 5:28 PM

ಲೋಕಸಭೆ ಸಭಾಪತಿ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಮಹತ್ವದ ಚರ್ಚೆ ಸೋಮವಾರ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಓಂ ಬಿರ್ಲಾ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಬಿರ್ಲಾ ಸಂವಿಧಾನಕ್ಕೆ ಸಮರ್ಪಿತರಾಗಿದ್ದಾರೆ ಮತ್ತು ಪಕ್ಷಾತೀತವಾಗಿ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಅವರ ವರ್ತನೆಯು ಸದನದ ಘನತೆಯನ್ನು ಹೆಚ್ಚಿಸಿದೆ ಎಂದೂ ಮೋದಿ ವಿಡಿಯೋದಲ್ಲಿ ತಿಳಿಸಿದ್ದಾರೆ.

ದೆಹಲಿ, ಮಾ.7: ಲೋಕಸಭೆಯ ಸಭಾಪತಿ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ (Opposition sponsored motion) ಕುರಿತು ಸೋಮವಾರ (ಮಾ.9) ಸದನದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಓಂ ಬಿರ್ಲಾ ಅವರು ಎಷ್ಟು ಅದ್ಭುತ ಸಂಸದರೋ ಅಷ್ಟೇ ಸಮರ್ಥ ಸಭಾಪತಿಯೂ ಆಗಿದ್ದಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಅವರು ದೇಶದ ಸಂವಿಧಾನಕ್ಕೆ ಸಂಪೂರ್ಣವಾಗಿ ಸಮರ್ಪಿತರಾಗಿದ್ದಾರೆ ಮತ್ತು ಸಂಸದೀಯ ವ್ಯವಸ್ಥೆಗಳ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಓಂ ಬಿರ್ಲಾ ಅವರು ಯಾವುದೇ ಒಂದು ಪಕ್ಷಕ್ಕೆ ಸೀಮಿತರಾಗಿಲ್ಲ. ಅವರು ಪಕ್ಷ ಮತ್ತು ಪ್ರತಿಪಕ್ಷಗಳಿಗಿಂತಲೂ ಮಿಗಿಲಾದ ಜವಾಬ್ದಾರಿಯನ್ನು ಅತ್ಯಂತ ಪಾರದರ್ಶಕವಾಗಿ ನಿಭಾಯಿಸುತ್ತಿದ್ದಾರೆ. ಎಷ್ಟೇ ಕಠಿಣ ಮಾತುಗಳು ಕೇಳಿಬಂದರೂ ಓಂ ಬಿರ್ಲಾ ಅವರು ಯಾವಾಗಲೂ ಮುಗುಳ್ನಗುತ್ತಲೇ ಇರುತ್ತಾರೆ. ಇಂತಹ ಹಿರಿಯ ಮುಖಂಡನ ವರ್ತನೆಯು ಸದನದ ಘನತೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ವಿಡಿಯೋವೊಂದು ಹಂಚಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Mar 07, 2026 05:10 PM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More