ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಭಾರತೀಯ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ನೆದರ್‌ಲ್ಯಾಂಡ್ಸ್‌ನಲ್ಲಿರುವ ಭಾರತೀಯ ವಲಸೆಗಾರರು ಭಾಗವಹಿಸಿದ ಸಮುದಾಯ ಕಾರ್ಯಕ್ರಮದ ಭಾಗವಾಗಿ ಈ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಪ್ರಸ್ತುತಿಗಳೊಂದಿಗೆ ಯುವ ಪ್ರದರ್ಶಕರು ಪ್ರಧಾನಿಯನ್ನು ಸ್ವಾಗತಿಸಿದರು. ಪ್ರಧಾನ ಮಂತ್ರಿಯವರು ಮೇ 15ರಿಂದ 20ರವರೆಗೆ 5 ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ನೆದರ್ಲ್ಯಾಂಡ್ಸ್ ಬಳಿಕ ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಕೂಡ ಭೇಟಿ ನೀಡಲಿದ್ದಾರೆ.
ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಹೇಗ್‌ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ ಮೋದಿಯವರಿಗೆ ಭಾರತ ಮೂಲದ ಯುವ ಕಲಾವಿದರು ಭಾರತೀಯ ಸಂಪ್ರದಾಯಗಳು ಮತ್ತು ಪರಂಪರೆಯನ್ನು ಪ್ರದರ್ಶಿಸುವ ಸಂಗೀತ, ನೃತ್ಯ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಪ್ರಧಾನ ಮಂತ್ರಿಯವರು ಮೇ 15ರಿಂದ 20ರವರೆಗೆ 5 ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ನೆದರ್ಲ್ಯಾಂಡ್ಸ್ ಬಳಿಕ ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಕೂಡ ಭೇಟಿ ನೀಡಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 16, 2026 03:41 PM
Follow Us
Latest Videos


