ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಭಾರತೀಯ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ

Updated on: May 16, 2026 | 3:41 PM

ನೆದರ್‌ಲ್ಯಾಂಡ್ಸ್‌ನಲ್ಲಿರುವ ಭಾರತೀಯ ವಲಸೆಗಾರರು ಭಾಗವಹಿಸಿದ ಸಮುದಾಯ ಕಾರ್ಯಕ್ರಮದ ಭಾಗವಾಗಿ ಈ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಪ್ರಸ್ತುತಿಗಳೊಂದಿಗೆ ಯುವ ಪ್ರದರ್ಶಕರು ಪ್ರಧಾನಿಯನ್ನು ಸ್ವಾಗತಿಸಿದರು. ಪ್ರಧಾನ ಮಂತ್ರಿಯವರು ಮೇ 15ರಿಂದ 20ರವರೆಗೆ 5 ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ನೆದರ್ಲ್ಯಾಂಡ್ಸ್​ ಬಳಿಕ ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಕೂಡ ಭೇಟಿ ನೀಡಲಿದ್ದಾರೆ.

ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಹೇಗ್‌ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ ಮೋದಿಯವರಿಗೆ ಭಾರತ ಮೂಲದ ಯುವ ಕಲಾವಿದರು ಭಾರತೀಯ ಸಂಪ್ರದಾಯಗಳು ಮತ್ತು ಪರಂಪರೆಯನ್ನು ಪ್ರದರ್ಶಿಸುವ ಸಂಗೀತ, ನೃತ್ಯ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಪ್ರಧಾನ ಮಂತ್ರಿಯವರು ಮೇ 15ರಿಂದ 20ರವರೆಗೆ 5 ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ನೆದರ್ಲ್ಯಾಂಡ್ಸ್​ ಬಳಿಕ ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಕೂಡ ಭೇಟಿ ನೀಡಲಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 16, 2026 03:41 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More