ಬಿಜೆಪಿ ಸರ್ಕಾರದ ಪ್ರಮಾಣವಚನಕ್ಕೆ ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯುತ್ತಿದೆ. ರಾಜಧಾನಿ ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿದ್ದು, ಮೊದಲ ಬಾರಿಗೆ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಕೊಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್‌ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಪಾಲ್ಗೊಂಡಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಸಮಾರಂಭ ನಡೆಯುತ್ತಿದ್ದು, ಅಲ್ಲಿಗೆ ಮೋದಿ ಆಗಮಿಸುತ್ತಿದ್ದಂತೆ “ಮೋದಿ, ಮೋದಿ” ಘೋಷಣೆಗಳು ಪ್ರತಿಧ್ವನಿಸಿದವು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us

