ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ

Updated on: Dec 22, 2024 | 3:38 PM

ಕುವೈತ್‌ನ ಬಯಾನ್ ಪ್ಯಾಲೇಸ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಮೋದಿಯವರಿಗೆ ಗಾರ್ಡ್ ಆಫ್ ಆನರ್ ನೀಡಲಾಯಿತು. ಇದರ ನಂತರ ಕ್ರೌನ್ ಪ್ರಿನ್ಸ್ ಸಬಾಹ್ ಅಲ್-ಖಾಲಿದ್ ಅಲ್-ಸಬಾಹ್ ಮತ್ತು ಅವರ ಕುವೈತ್ ಕೌಂಟರ್‌ನೊಂದಿಗೆ ಪ್ರಧಾನ ಮಂತ್ರಿ ಮೋದಿ ಸಭೆ ನಡೆಸಿದ್ದಾರೆ.

ನವದೆಹಲಿ: ತಮ್ಮ 2 ದಿನಗಳ ಕುವೈತ್ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುಂಚಿತವಾಗಿ ಬಯಾನ್ ಅರಮನೆಯಲ್ಲಿ ಅದ್ದೂರಿ ಸ್ವಾಗತ ನೀಡಿ, ಗಾರ್ಡ್ ಆಫ್ ಆನರ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಮೋದಿ ಭೇಟಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More