ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ

Updated on: Feb 07, 2026 | 4:39 PM

ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು ನಡೆಸಲಾಗುವುದು.

ಕೌಲಾಲಂಪುರ, ಫೆಬ್ರವರಿ 7: 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ (PM Modi) ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು ನಡೆಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 07, 2026 04:38 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More