ಮಸ್ಕತ್‌ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಒಮಾನ್‌ನಲ್ಲಿರುವ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಮಸ್ಕತ್‌ನಲ್ಲಿ ನೂರಾರು ಜನರು ಅವರನ್ನು ಸ್ವಾಗತಿಸಲು ಭಾರತೀಯ ಧ್ವಜಗಳನ್ನು ಬೀಸುತ್ತಾ ಮತ್ತು ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ನೆರೆದಿದ್ದರು. ಹೋಟೆಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಭಾರತೀಯ ಅನಿವಾಸಿಗಳನ್ನು ಪ್ರಧಾನಿ ಸ್ವಾಗತಿಸಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು. ಸ್ವಾಗತ ಸಮಾರಂಭದ ಭಾಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ಪ್ರದರ್ಶನಗಳನ್ನು ಸಹ ಅವರು ವೀಕ್ಷಿಸಿದರು.
ಮಸ್ಕತ್, ಡಿಸೆಂಬರ್ 17: ಒಮನ್ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ (PM Modi Oman Visit) ಮಸ್ಕತ್‌ನಲ್ಲಿ ಭಾರತೀಯ ವಲಸಿಗರು ಅದ್ದೂರಿ ಸ್ವಾಗತ ನೀಡಿದರು. ಯಕ್ಷಗಾನ, ಹಿಂದಿ ಗೀತೆಗಳು, ನೃತ್ಯವನ್ನು ಪ್ರದರ್ಶಿಸಿ ಮೋದಿಯನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಭಾರತೀಯರು ತ್ರಿವರ್ಣ ಧ್ವಜ ಹಿಡಿದು ‘ಮೋದಿ, ಮೋದಿ’, ‘ವಂದೇ ಮಾತರಂ’ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಘಾರ ಮಾಡಿದರು.
ಹೋಟೆಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಭಾರತೀಯ ಅನಿವಾಸಿಗಳನ್ನು ಪ್ರಧಾನಿ ಮೋದಿ ಭೇಟಿಯಾಗಿ, ಅವರೊಂದಿಗೆ ಸಂವಾದ ನಡೆಸಿದರು. ಸ್ವಾಗತ ಸಮಾರಂಭದ ಭಾಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ಪ್ರದರ್ಶನಗಳನ್ನು ಸಹ ಅವರು ವೀಕ್ಷಿಸಿದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್

