ಕೈ ಮೇಲೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ​

|

Updated on: May 06, 2023 | 9:54 AM

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 26 ಕಿ.ಮೀ. ಮೆಗಾ ರೋಡ್ ಶೋ ನಡೆಸಲಿದ್ದಾರೆ. ಪ್ರಧಾನಿ ಮೋದಿಯವರನ್ನು ನೋಡಲು ರಸ್ತೆಯ ಅಕ್ಕ-ಪಕ್ಕದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.

ಬೆಂಗಳೂರು: ಇಂದು (ಮೇ.06) ಮಹಾನಗರ ಸಂಪೂರ್ಣ ಕೇಸರಿಮಯವಾಗಿದೆ. ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 26 ಕಿ.ಮೀ. ಮೆಗಾ ರೋಡ್ ಶೋ ನಡೆಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಜೆ.ಪಿ ನಗರ ಬ್ರಿಗೇಡ್ ಮಿಲೇನಿಯಂನಿಂದ ಆರಂಭವಾಗಲಿರುವ ರೋಡ್ ಶೋ. ಸೌತ್ ಎಂಡ್ ಸರ್ಕಲ್, ಕೃಷ್ಣ ರಾವ್ ಪಾರ್ಕ್ ಮೂಲಕ ರಾಮಕೃಷ್ಣ ಆಶ್ರಮ ಮಾರ್ಗವಾಗಿ ಆಗಮಿಸುತ್ತದೆ. ಈ ಹಿನ್ನೆಲೆ ಪ್ರಧಾನಿ ಮೋದಿಯವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಪ್ರಧಾನಿ ಮೋದಿಯವರನ್ನು ನೋಡಲು ಕಾಯುತ್ತಿರುವ ಓರ್ವ ಅಭಿಮಾನಿ ಕೈಯಲ್ಲಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್​​ ಟ್ಯಾಟೊ ಹಾಕಿಸಿಕೊಂಡಿದ್ದಾರೆ.