Loading video

ಉಗ್ರರು, ಅವರ ಪೋಷಕರು ಮತ್ತು ಪಾಕಿಸ್ತಾನದ ವಿರುದ್ಧ ಪ್ರಧಾನಿ ಮೋದಿ ಸಿಂಹದಂತೆ ಘರ್ಜಿಸಿದ್ದಾರೆ: ಈಶ್ವರಪ್ಪ

Updated on: Apr 25, 2025 | 8:33 PM

ಪಹಲ್ಗಾಮ್ ಉಗ್ರರ ದಾಳಿ ಭಾರತೀಯರನ್ನು ಪಕ್ಷಾತೀತವಾಗಿ ಒಗ್ಗೂಡಿಸಿದೆ ಎಂದು ಈಶ್ವರಪ್ಪ ಹೇಳಿದರು. ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಯವರ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲವಾಗಿ ನಿಲ್ಲುತ್ತದೆ, ಉಗ್ರರ ವಿರುದ್ಧ ಇಡೀ ದೇಶ ಒಂದಾಗಬೇಕಿದೆ ಎಂದು ಹೇಳಿದ್ದು ಜನರಲ್ಲಿ ಸ್ಫೂರ್ತಿ ತುಂಬಿದೆ ಎಂದು ಈಶ್ವರಪ್ಪ ಹೇಳಿದರು.

ಶಿವಮೊಗ್ಗ, ಏಪ್ರಿಲ್ 25: ಪ್ರಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾತಾಡಿದ ಮಾಜಿ ಶಾಸಕ ಕೆಎಸ್ ಈಶ್ವರಪ್ಪ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕೂಡಲೇ ಕಾರ್ಯೋನ್ಮುಖರಾಗಿ ಹಲವಾರು ಕ್ರಮಗಳನ್ನು ತೆಗೆದುಕೊಡು ಪಾಕಿಸ್ತಾನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ ಎಂದು ಹೇಳಿದರು. ಸಾಮಾನ್ಯವಾಗಿ ಹಿಂದಿಯಲ್ಲಿ ಭಾಷಣ ಮಾಡುವ ಮೋದಿ ಅವರು, ಬಿಹಾರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಭಾಷಣ ಮಾಡುವಾಗ ಮಾತ್ರ ಇಂಗ್ಲಿಷ್​ನಲ್ಲಿ ಮಾತಾಡಿ, ಹಿಂದೂಗಳ ಮಾರಣಹೋಮಕ್ಕೆ ಕಾರಣೀಕರ್ತರಾಗಿರುವ ಉಗ್ರರು ಮತ್ತು ಅವರ ಪೋಷಕರು ಎಲ್ಲೇ ಅಡಗಿದ್ದರೂ ಹುಡುಕಿ ಹುಡುಕಿ ಮಣ್ಣಲ್ಲಿ ಮಣ್ಣಾಗಿಸುತ್ತೇವೆ, ಜಿವನದಲ್ಲಿ ಅವರು ಯಾವತ್ತೂ ಊಹಿಸಿರದ ಶಿಕ್ಷೆಯನ್ನು ಕೊಡುತ್ತೇವೆ ಎಂದು ಸಿಂಹದಂತೆ ಘರ್ಜಿಸಿದರು ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:  ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದೇನು?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Apr 25, 2025 02:44 PM