ಬ್ರೆಜಿಲ್‌ನಲ್ಲಿ ನಡೆದ ಜಿ-20 ಶೃಂಗಸಭೆಯ ಮೊದಲ ದಿನದ ಪ್ರಮುಖ ಅಂಶಗಳನ್ನು ತೋರಿಸುವ ವಿಡಿಯೋವೊಂದನ್ನು ಪ್ರಧಾನಿ ಮೋದಿ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಯುಎಸ್, ಇಟಲಿ, ಫ್ರಾನ್ಸ್, ಸ್ಪೇನ್ ಮತ್ತು ಸಿಂಗಾಪುರ ಸೇರಿದಂತೆ ಹಲವಾರು ವಿಶ್ವ ನಾಯಕರೊಂದಿಗೆ ಸಂವಾದ ನಡೆಸಿದರು ಮತ್ತು ಬಾಂಧವ್ಯವನ್ನು ಸುಧಾರಿಸುವ ಮತ್ತು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು.
ರಿಯೊ ಡಿ ಜನೈರೊದಲ್ಲಿ ಜಿ 20 ಶೃಂಗಸಭೆಯನ್ನು ಆಯೋಜಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾದರು. ಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಇಬ್ಬರು ನಾಯಕರು ಹಸ್ತಲಾಘವ ಮಾಡುವುದನ್ನು ತೋರಿಸುವ ವಿಡಿಯೋವನ್ನು ನಾವು ಕಾಣಬಹುದು.
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ರಿಯೊ ಡಿ ಜನೈರೊ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರನ್ನು ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ನಮ್ಮ ಮಾತುಕತೆಗಳು ರಕ್ಷಣೆ, ಭದ್ರತೆ, ವ್ಯಾಪಾರ ಮತ್ತು ತಂತ್ರಜ್ಞಾನದಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಸುತ್ತ ಕೇಂದ್ರೀಕೃತವಾಗಿವೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದರು ಮತ್ತು ಬಾಹ್ಯಾಕಾಶ, ಇಂಧನ ಮತ್ತು ಎಐ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಾರ್ಗಗಳನ್ನು ಚರ್ಚಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ