Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ: 2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ಶ್ರೀಲಂಕಾ: 2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ನಯನಾ ರಾಜೀವ್
|

Updated on: Apr 06, 2025 | 12:14 PM

ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರೊಂದಿಗೆ 2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಶ್ರೀಲಂಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮಿತ್ರ ವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು . ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಮತ್ತು ಎರಡೂ ದೇಶಗಳ ನಡುವಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಬಾಂಧವ್ಯವನ್ನು ಬೆಳೆಸಲು ಮೋದಿ ನೀಡಿದ ಕೊಡುಗೆಗಳನ್ನು ಗುರುತಿಸಿ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕೊಲಂಬೋ, ಏಪ್ರಿಲ್ 06: ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರೊಂದಿಗೆ 2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಶ್ರೀಲಂಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮಿತ್ರ ವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು .

ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಮತ್ತು ಎರಡೂ ದೇಶಗಳ ನಡುವಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಬಾಂಧವ್ಯವನ್ನು ಬೆಳೆಸಲು ಮೋದಿ ನೀಡಿದ ಕೊಡುಗೆಗಳನ್ನು ಗುರುತಿಸಿ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಧಾನಿ ಮೋದಿ ಈ ಗೌರವಕ್ಕೆ ನಿಜವಾಗಿಯೂ ಅರ್ಹರು ಎಂದು ನಾವು ದೃಢವಾಗಿ ನಂಬುತ್ತೇವೆ. ಶ್ರೀಲಂಕಾ ಸರ್ಕಾರವು ಅವರಿಗೆ ಅತ್ಯುನ್ನತ ಪ್ರಶಸ್ತಿ – ಶ್ರೀಲಂಕಾ ಮಿತ್ರ ವಿಭೂಷಣವನ್ನು ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಅಧ್ಯಕ್ಷರು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ