ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ

Updated on: Oct 11, 2026 | 12:30 PM

ಮಿಳುನಾಡಿನ ಚೆನ್ನೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರೊಂದಿಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಕೈಗೊಂಡರು. ಪೊರುರ್ ಬೈಪಾಸ್ ಮೆಟ್ರೋ ನಿಲ್ದಾಣದಿಂದ ಪೂನಮಲ್ಲಿ ಬೈಪಾಸ್ ನಿಲ್ದಾಣದವರೆಗೆ ತೆರಳಿ, ಅಲ್ಲಿಂದ ಹಿಂದಿರುಗಿದರು. ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತದ ಹೊಸ ಮಾರ್ಗದ ಉದ್ಘಾಟನೆ ಹಿನ್ನೆಲೆಯಲ್ಲಿ ಈ ಪ್ರಯಾಣ ಮಹತ್ವ ಪಡೆದಿದೆ.

ಚೆನ್ನೈ, ಅಕ್ಟೋಬರ್ 11: ತಮಿಳುನಾಡಿನ ಚೆನ್ನೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರೊಂದಿಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಕೈಗೊಂಡರು. ಪೊರುರ್ ಬೈಪಾಸ್ ಮೆಟ್ರೋ ನಿಲ್ದಾಣದಿಂದ ಪೂನಮಲ್ಲಿ ಬೈಪಾಸ್ ನಿಲ್ದಾಣದವರೆಗೆ ತೆರಳಿ, ಅಲ್ಲಿಂದ ಹಿಂದಿರುಗಿದರು.

ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತದ ಹೊಸ ಮಾರ್ಗದ ಉದ್ಘಾಟನೆ ಹಿನ್ನೆಲೆಯಲ್ಲಿ ಈ ಪ್ರಯಾಣ ಮಹತ್ವ ಪಡೆದಿದೆ. ಸುಮಾರು 4,900 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಪೂನಮಲ್ಲಿ–ವಡಪಳನಿ ಮಾರ್ಗವು ಸುಮಾರು 14.6 ಕಿಲೋಮೀಟರ್ ಉದ್ದ ಹೊಂದಿದೆ. ಈ ಮಾರ್ಗದಲ್ಲಿ 3.7 ಕಿಲೋಮೀಟರ್ ಉದ್ದದ ಡಬಲ್‌ ಡೆಕ್ಕರ್‌ ರಚನೆಯೂ ಇದೆ.

ಹೊಸ ಮೆಟ್ರೋ ಮಾರ್ಗದಿಂದ ಚೆನ್ನೈನ ಪಶ್ಚಿಮ ಭಾಗದ ಉಪನಗರಗಳು ಮತ್ತು ನಗರದ ಪ್ರಮುಖ ಪ್ರದೇಶಗಳ ನಡುವಿನ ಸಂಪರ್ಕ ಸುಧಾರಿಸುವ ನಿರೀಕ್ಷೆಯಿದೆ. ಇದರಿಂದ ಪ್ರಯಾಣಿಕರಿಗೆ ವೇಗವಾದ ಸಂಚಾರ ಸೌಲಭ್ಯ ದೊರೆಯುವುದರ ಜೊತೆಗೆ ರಸ್ತೆಗಳಲ್ಲಿ ವಾಹನ ದಟ್ಟಣೆ ಕಡಿಮೆಯಾಗಲು ಸಹಾಯವಾಗಬಹುದು.

ಪ್ರಧಾನಿ ಮೋದಿ ಅವರ ಚೆನ್ನೈ ಭೇಟಿಯ ಸಂದರ್ಭದಲ್ಲಿ ಮೆಟ್ರೋ, ಹೆದ್ದಾರಿ, ರೈಲ್ವೆ, ಬಂದರು, ಪೆಟ್ರೋಲಿಯಂ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಿಸಿದ 13,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮವೂ ನಿಗದಿಯಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More