ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ
ಗುವಾಹಟಿಯಲ್ಲಿ ನಾಳೆ ಈಶಾನ್ಯ ರಾಜ್ಯದ ಅತಿ ದೊಡ್ಡ ಹಾಗೂ ನೈಸರ್ಗಿಕ ಥೀಮ್ನ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. "ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು.
ಗುವಾಹಟಿ, ಡಿಸೆಂಬರ್ 19: ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಡಿಸೆಂಬರ್ 20) ಈಶಾನ್ಯ ರಾಜ್ಯದ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಈ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ (ಎಲ್‌ಜಿಬಿಐ) ವಿಮಾನ ನಿಲ್ದಾಣ ಅಸ್ಸಾಂ ಮತ್ತು ಈಶಾನ್ಯದ ವಾಯುಯಾನ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದು ಈಶಾನ್ಯ ರಾಜ್ಯಗಳ ಪ್ರವಾಸೋದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ.
ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. “ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು. ಇದು ಅಸ್ಸಾಂನ ಮೂಲಸೌಕರ್ಯಕ್ಕೆ ಪ್ರಮುಖ ಉತ್ತೇಜನ ನೀಡುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ