ಇಂದು ಉದ್ಘಾಟನೆಯಾಗಲಿರುವ 51 ಶಕ್ತಿ ಪೀಠಗಳಲ್ಲಿ ಒಂದಾದ ಮಾತಾ ತ್ರಿಪುರ ಸುಂದರಿ ದೇವಾಲಯ ಹೇಗಿದೆ ನೋಡಿ

Updated on: Sep 22, 2025 | 3:56 PM

ಅರುಣಾಚಲ ಪ್ರದೇಶದ ಭೇಟಿಯ ನಂತರ ಪ್ರಧಾನಿ ಮೋದಿ ಅಗರ್ತಲಾಕ್ಕೆ ಆಗಮಿಸಲಿದ್ದಾರೆ. ಇದಾದ ನಂತರ ಉದಯಪುರದ ಗೋಮತಿ ಜಿಲ್ಲಾ ಕೇಂದ್ರಕ್ಕೆ ತೆರಳಿ ಪ್ರಸಾದ್ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಳಿಸಲಾದ ತ್ರಿಪುರ ಸುಂದರಿ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ಮೋದಿ ಇಲ್ಲಿ ಸಾರ್ವಜನಿಕ ಭಾಷಣ ಮಾಡುವುದಿಲ್ಲ. ಈಗಾಗಲೇ ಪ್ರಧಾನಿ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಅಗರ್ತಲಾ ಮತ್ತು ದೇವಾಲಯ ಪಟ್ಟಣವಾದ ಉದಯಪುರದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ತ್ರಿಪುರಾ, ಸೆಪ್ಟೆಂಬರ್ 22: ತ್ರಿಪುರಾದ ಉದಯಪುರದಲ್ಲಿ ಹಿಂದೂಗಳು ಪೂಜಿಸುವ 51 ಶಕ್ತಿ ಪೀಠಗಳಲ್ಲಿ ಒಂದಾದ ಪುನರಾಭಿವೃದ್ಧಿಗೊಳಿಸಲಾದ ಮಾತಾ ತ್ರಿಪುರ ಸುಂದರಿ ದೇವಾಲಯವನ್ನು (Mata Tripura Sundari Temple Complex) ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಇನ್ನೇನು ಕೆಲವೇ ಕ್ಷಣಗಳಲ್ಲಿ ಉದ್ಘಾಟಿಸಲಿದ್ದಾರೆ. ಅರುಣಾಚಲ ಪ್ರದೇಶದ ಭೇಟಿಯ ನಂತರ ಪ್ರಧಾನಿ ಮೋದಿ ಅಗರ್ತಲಾಕ್ಕೆ ಆಗಮಿಸಲಿದ್ದಾರೆ. ಇದಾದ ನಂತರ ಉದಯಪುರದ ಗೋಮತಿ ಜಿಲ್ಲಾ ಕೇಂದ್ರಕ್ಕೆ ತೆರಳಿ ಪ್ರಸಾದ್ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಳಿಸಲಾದ ತ್ರಿಪುರ ಸುಂದರಿ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ಮೋದಿ ಇಲ್ಲಿ ಸಾರ್ವಜನಿಕ ಭಾಷಣ ಮಾಡುವುದಿಲ್ಲ. ಈಗಾಗಲೇ ಪ್ರಧಾನಿ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಅಗರ್ತಲಾ ಮತ್ತು ದೇವಾಲಯ ಪಟ್ಟಣವಾದ ಉದಯಪುರದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ