AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ: ಅರುಣ್ ಯೋಗಿರಾಜ್ ಕೆತ್ತಿದ ವಿವೇಕಾನಂದರ ಏಕಶಿಲಾ ಮೂರ್ತಿ ಸಿದ್ಧ

ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ: ಅರುಣ್ ಯೋಗಿರಾಜ್ ಕೆತ್ತಿದ ವಿವೇಕಾನಂದರ ಏಕಶಿಲಾ ಮೂರ್ತಿ ಸಿದ್ಧ

ರಾಮ್​, ಮೈಸೂರು
| Edited By: |

Updated on: Jul 30, 2026 | 11:52 AM

Share

ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲು ಮೈಸೂರಿಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಶಿಲ್ಪಿ ಅರುಣ್ ಯೋಗಿರಾಜ್ ವಿಶೇಷ ಉಡುಗೊರೆ ಸಿದ್ಧಪಡಿಸಿದ್ದಾರೆ. ವಿಯೆಟ್ನಾಂ ಮಾರ್ಬಲ್‌ನಲ್ಲಿ ಕೆತ್ತಲಾಗಿರುವ ಸ್ವಾಮಿ ವಿವೇಕಾನಂದರ ಏಕಶಿಲಾ ಮೂರ್ತಿಯನ್ನು ಆಗಸ್ಟ್ 1ರಂದು ಪ್ರಧಾನಿಗೆ ನೀಡಲಾಗುತ್ತದೆ.

ಮೈಸೂರು, ಜುಲೈ 30: ಪ್ರಧಾನಿ ನರೇಂದ್ರ ಮೋದಿ ಅವರ ಆಗಸ್ಟ್ 1ರ ಮೈಸೂರು ಭೇಟಿಗೆ ವಿಶೇಷ ಉಡುಗೊರೆಯೊಂದು ಸಿದ್ಧವಾಗಿದೆ. ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ವಿಯೆಟ್ನಾಂ ಮಾರ್ಬಲ್‌ನಲ್ಲಿ ಕೆತ್ತಿರುವ ಸ್ವಾಮಿ ವಿವೇಕಾನಂದರ ಏಕಶಿಲಾ ಮೂರ್ತಿಯನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಲು ಸಿದ್ಧತೆ ಮಾಡಲಾಗಿದೆ. ಆಗಸ್ಟ್ 1ರಂದು ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇದೇ ವೇಳೆ ಅರುಣ್ ಯೋಗಿರಾಜ್ ಕೆತ್ತಿರುವ ವಿವೇಕಾನಂದರ ಮೂರ್ತಿಯನ್ನು ಪ್ರಧಾನಿಗೆ ನೀಡಲಾಗುತ್ತದೆ.

ಈ ವಿಶೇಷ ಮೂರ್ತಿಯು 8.5 ಕೆ.ಜಿ. ತೂಕ ಮತ್ತು 1.5 ಅಡಿ ಎತ್ತರ ಹೊಂದಿದೆ. ವಿಯೆಟ್ನಾಂ ಮಾರ್ಬಲ್‌ನಲ್ಲಿ ಮೂರ್ತಿಯನ್ನು ನಿರ್ಮಿಸಲಾಗಿದ್ದು, ಕೇವಲ 15 ದಿನಗಳಲ್ಲಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಪೂರ್ಣಗೊಳಿಸಿದ್ದಾರೆ. ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೋರಿಯಲ್‌ನ ಮಾದರಿಯನ್ನು ಆಧರಿಸಿ ಮೂರ್ತಿಯ ವಿನ್ಯಾಸ ರೂಪಿಸಲಾಗಿದೆ. ಪ್ರಧಾನಿ ಮೋದಿ ಅವರು ಸುಲಭವಾಗಿ ಕೈಯಲ್ಲಿ ಹಿಡಿದುಕೊಳ್ಳುವಂತೆ ಮೂರ್ತಿಯ ತೂಕವನ್ನು 10 ಕೆ.ಜಿಗಿಂತ ಕಡಿಮೆ ಇರುವಂತೆ ವಿನ್ಯಾಸಗೊಳಿಸಲಾಗಿದೆ.

ಈ ಹಿಂದೆಯೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಶಿಲ್ಪಗಳನ್ನು ಉಡುಗೊರೆಯಾಗಿ ನೀಡಿರುವುದಾಗಿ ಅರುಣ್ ಯೋಗಿರಾಜ್ ತಿಳಿಸಿದ್ದಾರೆ. ಇದೀಗ ಸ್ವಾಮಿ ವಿವೇಕಾನಂದರ ಮೂರ್ತಿಯನ್ನು ಪ್ರಧಾನಿಗೆ ನೀಡುವ ಅವಕಾಶ ಕಲ್ಪಿಸಿರುವ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More