ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ; ಮಹಿಳಾ ಅಭಿಮಾನಿಗಳ ಹರ್ಷೋದ್ಘಾರ
ಸಾರ್ವಜನಿಕರ ಜಯಘೋಷಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಉಪ ಪವನ್ ಕಲ್ಯಾಣ್ ಅವರೊಂದಿಗೆ ಇಂದು ರೋಡ್ ಶೋ ನಡೆಸಿದರು. ಈ ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ತೆರೆದ ವಾಹನದ ಮೇಲೆ ಪ್ರಯಾಣಿಸುತ್ತಿದ್ದ ನಾಯಕರ ಮೇಲೆ ಪುಷ್ಪವೃಷ್ಟಿ ಮಾಡಿದರು. ಇಡೀ ಪ್ರದೇಶವನ್ನು ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷದ ಧ್ವಜಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಇಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ವಿಶಾಖಪಟ್ಟಣ: 2 ಲಕ್ಷ ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ದಾರಿಯುದ್ದಕ್ಕೂ ಹೂವಿನ ಸುರಿಮಳೆಗೈದು ಸ್ವಾಗತ ಕೋರಲಾಯಿತು. ಮೋದಿ ರೋಡ್ ಶೋ ವೇಳೆ ಇಕ್ಕೆಲಗಳಲ್ಲಿ ನಿಂತಿದ್ದ ಮಹಿಳಾ ಅಭಿಮಾನಿಗಳು ಮೋದಿಯನ್ನು ಕಂಡು ಭಾವುಕರಾದರು. ಹಾಗೇ, ಹರ್ಷೋದ್ಘಾರದಿಂದ ಜೈಕಾರ ಹಾಕುತ್ತಾ ಹೂವಿನ ರಾಶಿಯನ್ನೇ ಹಾಸಿದರು. ಪ್ರಧಾನಿ ಮೋದಿಯವರೇ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು, ವಿಶಾಖಪಟ್ಟಣದ ಜನರ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos