ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ; ಮಹಿಳಾ ಅಭಿಮಾನಿಗಳ ಹರ್ಷೋದ್ಘಾರ

|

Updated on: Jan 08, 2025 | 10:10 PM

ಸಾರ್ವಜನಿಕರ ಜಯಘೋಷಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಉಪ ಪವನ್ ಕಲ್ಯಾಣ್ ಅವರೊಂದಿಗೆ ಇಂದು ರೋಡ್ ಶೋ ನಡೆಸಿದರು. ಈ ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ತೆರೆದ ವಾಹನದ ಮೇಲೆ ಪ್ರಯಾಣಿಸುತ್ತಿದ್ದ ನಾಯಕರ ಮೇಲೆ ಪುಷ್ಪವೃಷ್ಟಿ ಮಾಡಿದರು. ಇಡೀ ಪ್ರದೇಶವನ್ನು ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷದ ಧ್ವಜಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಇಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ವಿಶಾಖಪಟ್ಟಣ: 2 ಲಕ್ಷ ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ದಾರಿಯುದ್ದಕ್ಕೂ ಹೂವಿನ ಸುರಿಮಳೆಗೈದು ಸ್ವಾಗತ ಕೋರಲಾಯಿತು. ಮೋದಿ ರೋಡ್​ ಶೋ ವೇಳೆ ಇಕ್ಕೆಲಗಳಲ್ಲಿ ನಿಂತಿದ್ದ ಮಹಿಳಾ ಅಭಿಮಾನಿಗಳು ಮೋದಿಯನ್ನು ಕಂಡು ಭಾವುಕರಾದರು. ಹಾಗೇ, ಹರ್ಷೋದ್ಘಾರದಿಂದ ಜೈಕಾರ ಹಾಕುತ್ತಾ ಹೂವಿನ ರಾಶಿಯನ್ನೇ ಹಾಸಿದರು. ಪ್ರಧಾನಿ ಮೋದಿಯವರೇ ಈ ವಿಡಿಯೋವನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು, ವಿಶಾಖಪಟ್ಟಣದ ಜನರ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ