ಸಂಸತ್ ಮುಂಗಾರು ಅಧಿವೇಶನ: ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ ಮೋದಿ
ಸಂಸತ್ತಿನ ಮುಂಗಾರು ಅಧಿವೇಶನ ಶಾಸನಬದ್ಧವಾಗಿ ಆರಂಭವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದ ಭದ್ರತೆ, ಖಾಸಗಿ ಬಾಹ್ಯಾಕಾಶ ವಲಯದ ಯಶಸ್ಸು ಮತ್ತು ಜಾಗತಿಕ ಸವಾಲುಗಳ ನಡುವೆಯೂ ಭಾರತ ಸಾಧಿಸಿರುವ ಆರ್ಥಿಕ ಪ್ರಗತಿಯನ್ನು ಪ್ರಧಾನಿ ಮುಕ್ತಕಂಠದಿಂದ ಶ್ಲಾಘಿಸಿದರು. ಇಡೀ ಜಗತ್ತು ಹಾಗೂ ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿ ಯುದ್ಧ ಮತ್ತು ಸಂಘರ್ಷದ ಪರಿಸ್ಥಿತಿ ಎದುರಾಗಿದ್ದರೂ ಭಾರತದ ಆರ್ಥಿಕತೆ ಶಕ್ತಿಯುತವಾಗಿ ಬೆಳೆದಿದೆ ಎಂದು ಪ್ರಧಾನಿ ಹೇಳಿದರು.
ನವದೆಹಲಿ, ಜುಲೈ 20: ಸಂಸತ್ತಿನ ಮುಂಗಾರು ಅಧಿವೇಶನ ಶಾಸನಬದ್ಧವಾಗಿ ಆರಂಭವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದ ಭದ್ರತೆ, ಖಾಸಗಿ ಬಾಹ್ಯಾಕಾಶ ವಲಯದ ಯಶಸ್ಸು ಮತ್ತು ಜಾಗತಿಕ ಸವಾಲುಗಳ ನಡುವೆಯೂ ಭಾರತ ಸಾಧಿಸಿರುವ ಆರ್ಥಿಕ ಪ್ರಗತಿಯನ್ನು ಪ್ರಧಾನಿ ಮುಕ್ತಕಂಠದಿಂದ ಶ್ಲಾಘಿಸಿದರು. ಇಡೀ ಜಗತ್ತು ಹಾಗೂ ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿ ಯುದ್ಧ ಮತ್ತು ಸಂಘರ್ಷದ ಪರಿಸ್ಥಿತಿ ಎದುರಾಗಿದ್ದರೂ ಭಾರತದ ಆರ್ಥಿಕತೆ ಶಕ್ತಿಯುತವಾಗಿ ಬೆಳೆದಿದೆ ಎಂದು ಪ್ರಧಾನಿ ಹೇಳಿದರು.
ಜಾಗತಿಕ ಮಟ್ಟದಲ್ಲಿ ತೀವ್ರ ಸವಾಲುಗಳು ಮತ್ತು ಪಶ್ಚಿಮ ಏಷ್ಯಾದ ಸಂಘರ್ಷದಿಂದ ಬಿಕ್ಕಟ್ಟು ಸೃಷ್ಟಿಯಾಗಿದ್ದರೂ ಸಹ, ಭಾರತವು ಶೇಕಡಾ 7.7 ರಷ್ಟು ಭಾರಿ ಆರ್ಥಿಕ ಬೆಳವಣಿಗೆಯನ್ನು ದಾಖಲಿಸಿದೆ. ಇದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ವಿಷಯ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದರು.ಭಾರತದ ಖಾಸಗಿ ಬಾಹ್ಯಾಕಾಶ ಸಂಸ್ಥೆ ‘ಸ್ಕೈರೂಟ್’ ಇತ್ತೀಚೆಗೆ ಸಾಧಿಸಿದ ರಾಕೆಟ್ ಉಡಾವಣೆಯ ಐತಿಹಾಸಿಕ ಯಶಸ್ಸನ್ನು ಪ್ರಧಾನಿ ವಿಶದವಾಗಿ ಸ್ಮರಿಸಿದರು.
ಕಳೆದ ವರ್ಷ ನಮ್ಮ ಭಾರತೀಯ ನಾಗರಿಕನೊಬ್ಬ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಈಗ ನಮ್ಮ ಯುವಕರು ಬಾಹ್ಯಾಕಾಶಕ್ಕೆ ಹೊಸ ಖಾಸಗಿ ಪ್ರಯಾಣ ಆರಂಭಿಸಿದ್ದಾರೆ.ಭಾರತದ ಯುವಕರ ಸಾಮರ್ಥ್ಯ ಮತ್ತು ಆಕಾಂಕ್ಷೆಗಳು ಬಾಹ್ಯಾಕಾಶದಷ್ಟೇ ಅಪರಿಮಿತವಾಗಿವೆ ಎಂದರು. ಸಂಸತ್ತಿನ ಕಲಾಪಗಳ ಕುರಿತು ಮಾತನಾಡಿದ ಪ್ರಧಾನಿ, ಅಧಿವೇಶನವು ಅತ್ಯಂತ ಫಲಪ್ರದವಾಗಿ ಮತ್ತು ಪ್ರಗತಿದಾಯಕವಾಗಿ ನಡೆಯಲಿ ಎಂದು ಆಶಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ