ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್ ಭೇಟಿಯ ನೆನಪುಗಳ ಹಂಚಿಕೊಂಡ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರ 3 ದಿನಗಳ ಅಮೆಇಕ ಪ್ರವಾಸ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ತಮ್ಮ ಯುಎಸ್ ಪ್ರವಾಸದ ಹೈಲೈಟ್ಸ್ ಅನ್ನು ಪ್ರಧಾನಿ ಮೋದಿ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಕ್ವಾಡ್ ಶೃಂಗಸಭೆಯಿಂದ ಭಾಗವಹಿಸುವುದರಿಂದ ಹಿಡಿದು ಡಯಾಸ್ಪೋರಾ ಕಾರ್ಯಕ್ರಮದವರೆಗೆ ಮೋದಿ ಅವರ 3 ದಿನಗಳ ಪ್ರವಾಸದ ಮುಖ್ಯಾಂಶಗಳು ಇಲ್ಲಿವೆ.
ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸವನ್ನು ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವದೇಶಕ್ಕೆ ಮರಳಿದ್ದಾರೆ. ಯುಎಸ್ಎಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅದರ ಪ್ರಮುಖಾಂಶಗಳ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 21ರಂದು ವಿಲ್ಮಿಂಗ್ಟನ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಸೆ. 22ರಂದು ಲಾಂಗ್ ಐಲ್ಯಾಂಡ್‌ನಲ್ಲಿ ಭಾರತೀಯ ಅಮೇರಿಕನ್ ಸಮುದಾಯದ ಸಾವಿರಾರು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು. ಸೋಮವಾರ ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯಲ್ಲಿ ಮಾತನಾಡಿದರು.
ಪ್ರಧಾನ ಮಂತ್ರಿ ಮೋದಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಚರ್ಚೆಯಲ್ಲಿ ತೊಡಗಿದ್ದರು ಮತ್ತು ಅಮೆರಿಕದ ಪ್ರಮುಖ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ದುಂಡುಮೇಜಿನ ಸಭೆ ನಡೆಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

