Video: ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ವೈಭವ ಕಣ್ತುಂಬಿಕೊಂಡ ಮೋದಿ

Updated on: Jun 06, 2025 | 12:22 PM

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ವಿಶ್ವದ ಅತ್ಯಂತ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್‌ ಸೇತುವೆ ಉದ್ಘಾಟನೆಗೂ ಮುನ್ನ ಪರಿಶೀಲನೆ ನಡೆಸಿದ್ದಾರೆ. ಚೆನಾಬ್‌ ನದಿ ಹರಿಯುವ ಕಣಿವೆ ಮೇಲೆ 359 ಮೀ. (1,178 ಅಡಿ) ಎತ್ತರದಲ್ಲಿ ನಿರ್ಮಾಣವಾಗಿರುವ ಈ ಸೇತುವೆ ಐಫೆಲ್‌ ಟವರ್‌ಗಿಂತಲೂ ಎತ್ತರವಾಗಿದೆ.

ಕಾಶ್ಮೀರ, ಜೂನ್ 06: ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ವಿಶ್ವದ ಅತ್ಯಂತ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್‌ ಸೇತುವೆ ಉದ್ಘಾಟನೆಗೂ ಮುನ್ನ ಪರಿಶೀಲನೆ ನಡೆಸಿದ್ದಾರೆ. ಚೆನಾಬ್‌ ನದಿ ಹರಿಯುವ ಕಣಿವೆ ಮೇಲೆ 359 ಮೀ. (1,178 ಅಡಿ) ಎತ್ತರದಲ್ಲಿ ನಿರ್ಮಾಣವಾಗಿರುವ ಈ ಸೇತುವೆ ಐಫೆಲ್‌ ಟವರ್‌ಗಿಂತಲೂ ಎತ್ತರವಾಗಿದೆ.

ಜಮ್ಮು ಮತ್ತು ಶ್ರೀನಗರ ನಡುವಿನ ಪ್ರಯಾಣದ ಅವಧಿಯನ್ನು 2-3 ಗಂಟೆ ಕಡಿತಗೊಳಿಸಿ 3 ಗಂಟೆಗೆ ಸೀಮಿತಗೊ ಳಿಸಲು ಈ ಸೇತುವೆ ನೆರವಾಗಲಿದೆ. ಭೂಕಂಪ ಸಂಭವಿಸಿದರೂ ಏನೂ ತೊಂದರೆಯಾಗದಂತೆ ಇದನ್ನು ನಿರ್ಮಿಸಲಾಗಿದೆ. ಎತ್ತರ 1,179 ಅಡಿ, ಉದ್ದ -1,315 ಮೀ, ಉಕ್ಕು-28,000+ ಟನ್‌, ವೆಚ್ಚ 1,486 ಕೋಟಿ ರೂ. ತಗುಲಿದೆ. ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುವಲ್ಲಿ ಸೇತುವೆಯ ಪ್ರಮುಖ ಪರಿಣಾಮ ಬೀರುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More