ಪ್ರಧಾನಿ ಮೋದಿ ಸಮ್ಮುಖದಲ್ಲಿ ವಾರಾಣಸಿಯಲ್ಲಿ ‘ವಿಂಗ್ಸ್ ಓವರ್ ಗಂಗಾ’ ಭವ್ಯ ಏರ್ ಶೋ! ನೇರಪ್ರಸಾರ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಕ್ಷೇತ್ರವಾದ ವಾರಾಣಸಿಯ ನಮೋ ಘಾಟ್ ಬಳಿ ಆಯೋಜಿಸಲಾಗಿರುವ 'ವಿಂಗ್ಸ್ ಓವರ್ ಗಂಗಾ' ಏರ್ ಶೋನಲ್ಲಿ ಭಾಗಿ0ಯಾಗಿದ್ದಾರೆ. ರಫೇಲ್ ಮತ್ತು ತೇಜಸ್ ಯುದ್ಧ ವಿಮಾನಗಳ ಸಾಹಸ ಪ್ರದರ್ಶನವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೀಕ್ಷಿಸಿರುವ ಈ ಭವ್ಯ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ.
ವಾರಣಾಸಿ, ಅಕ್ಟೋಬರ್ 25: ತಮ್ಮ ಸ್ವಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಮೋ ಘಾಟ್‌ನಲ್ಲಿ ಆಯೋಜಿಸಲಾಗಿರುವ ಅದ್ಧೂರಿ ‘ವಿಂಗ್ಸ್ ಓವರ್ ಗಂಗಾ’ (Wings Over Ganges) ಏರ್ ಶೋನಲ್ಲಿ ಭಾಗಿಯಾಗಿದ್ದಾರೆ. ಗಂಗಾ ನದಿಯ ತೀರದಲ್ಲಿ ನಡೆಯುತ್ತಿರುವ ಈ ಸಾಹಸಮಯ ವಾಯು ಪ್ರದರ್ಶನದಲ್ಲಿ ರಫೇಲ್ ಮತ್ತು ತೇಜಸ್ ಯುದ್ಧ ವಿಮಾನಗಳು ಆಕಾಶದಲ್ಲಿ ಕಸರತ್ತು ನಡೆಸಿ ನೋಡುಗರ ಮಂತ್ರಮುಗ್ಧಗೊಳಿಸಿವೆ. ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದು, ಭಾರತೀಯ ವಾಯುಪಡೆಯ ಸಾಹಸ ಪ್ರದರ್ಶನವನ್ನು ಕಣ್ತುಂಬಿಕೊಂಡಿದ್ದಾರೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 25, 2026 01:45 PM
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್ ಬಿಜೆಪಿ ಅಭ್ಯರ್ಥಿ ಸುರೇಶ್ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ

