ಪ್ರಧಾನಿ ಮೋದಿ ಸಮ್ಮುಖದಲ್ಲಿ ವಾರಾಣಸಿಯಲ್ಲಿ ‘ವಿಂಗ್ಸ್ ಓವರ್ ಗಂಗಾ’ ಭವ್ಯ ಏರ್ ಶೋ! ನೇರಪ್ರಸಾರ ಇಲ್ಲಿದೆ

Updated on: Oct 25, 2026 | 2:18 PM

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಕ್ಷೇತ್ರವಾದ ವಾರಾಣಸಿಯ ನಮೋ ಘಾಟ್ ಬಳಿ ಆಯೋಜಿಸಲಾಗಿರುವ 'ವಿಂಗ್ಸ್ ಓವರ್ ಗಂಗಾ' ಏರ್ ಶೋನಲ್ಲಿ ಭಾಗಿ0ಯಾಗಿದ್ದಾರೆ. ರಫೇಲ್ ಮತ್ತು ತೇಜಸ್ ಯುದ್ಧ ವಿಮಾನಗಳ ಸಾಹಸ ಪ್ರದರ್ಶನವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೀಕ್ಷಿಸಿರುವ ಈ ಭವ್ಯ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ.

ವಾರಣಾಸಿ, ಅಕ್ಟೋಬರ್ 25: ತಮ್ಮ ಸ್ವಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಮೋ ಘಾಟ್‌ನಲ್ಲಿ ಆಯೋಜಿಸಲಾಗಿರುವ ಅದ್ಧೂರಿ ‘ವಿಂಗ್ಸ್ ಓವರ್ ಗಂಗಾ’ (Wings Over Ganges) ಏರ್ ಶೋನಲ್ಲಿ ಭಾಗಿಯಾಗಿದ್ದಾರೆ. ಗಂಗಾ ನದಿಯ ತೀರದಲ್ಲಿ ನಡೆಯುತ್ತಿರುವ ಈ ಸಾಹಸಮಯ ವಾಯು ಪ್ರದರ್ಶನದಲ್ಲಿ ರಫೇಲ್ ಮತ್ತು ತೇಜಸ್ ಯುದ್ಧ ವಿಮಾನಗಳು ಆಕಾಶದಲ್ಲಿ ಕಸರತ್ತು ನಡೆಸಿ ನೋಡುಗರ ಮಂತ್ರಮುಗ್ಧಗೊಳಿಸಿವೆ. ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದು, ಭಾರತೀಯ ವಾಯುಪಡೆಯ ಸಾಹಸ ಪ್ರದರ್ಶನವನ್ನು ಕಣ್ತುಂಬಿಕೊಂಡಿದ್ದಾರೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 25, 2026 01:45 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More