ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ

Edited By:

Updated on: May 17, 2026 | 12:32 PM

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಮಾರಾಟದಲ್ಲಿ ಶೇಕಡ 50ರಷ್ಟು ಇಳಿಕೆ ಕಂಡುಬಂದಿದೆ. ಇಂಧನ ಮಾರಾಟವೂ ಪ್ರತಿದಿನ 150-250 ಲೀಟರ್ ಕಡಿಮೆಯಾಗಿದ್ದು, ನಾಗರಿಕರು ಮೆಟ್ರೋ ಮತ್ತು ಬಸ್‌ಗಳತ್ತ ಮುಖ ಮಾಡಿದ್ದಾರೆ. ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ದೇಶಭಕ್ತಿ ತೋರಲು ಮೋದಿ ನೀಡಿದ ಕರೆಗೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ದೊರೆತಿದೆ.

ಬೆಂಗಳೂರು, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಹಿತಾಸಕ್ತಿ ಕಾಪಾಡಲು ನೀಡಿರುವ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಇಂಧನ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ಮಾರಾಟವು ಶೇಕಡ 50ರಷ್ಟು ಕಡಿಮೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ಸಹ ಕೊಂಚ ಇಳಿಕೆಯನ್ನು ಕಂಡಿದೆ. ಬಂಕ್‌ಗಳಲ್ಲಿ ಪ್ರತಿದಿನ 150 ರಿಂದ 250 ಲೀಟರ್ ಇಂಧನ ಮಾರಾಟ ಕಡಿಮೆಯಾಗಿದ್ದು, ನಾಗರಿಕರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಮೆಟ್ರೋ ಮತ್ತು ಸಾರಿಗೆ ಬಸ್‌ಗಳತ್ತ ಮುಖ ಮಾಡಿದ್ದಾರೆ. ಆಭರಣ ಪ್ರಿಯರು ಸಹ ಚಿನ್ನಾಭರಣ ಖರೀದಿಯನ್ನು ಕಡಿಮೆ ಮಾಡಿಕೊಂಡಿದ್ದು, ಅಂಗಡಿಗಳು ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿವೆ. ಮದುವೆ ಸೇರಿದಂತೆ ಅನಿವಾರ್ಯ ಕಾರ್ಯಕ್ರಮಗಳಿಗಾಗಿ ತಾಳಿ ಬೊಟ್ಟು, ಉಂಗುರಗಳಂತಹ ಅಗತ್ಯ ಚಿನ್ನಾಭರಣಗಳನ್ನು ಮಾತ್ರ ಜನರು ಖರೀದಿಸುತ್ತಿದ್ದಾರೆ ಎಂದು ವರ್ತಕರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More