ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ! ಮಠದ ಸುತ್ತಲೂ ಸೆಕ್ಯೂರಿಟಿ ಹೇಗಿದೆ ನೋಡಿ!

Edited By:

Updated on: Apr 15, 2026 | 8:22 AM

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿಯಾಗಿದೆ. ಪ್ರಧಾನಿಯ ಸ್ವಾಗತಕ್ಕಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.

ಮಂಡ್ಯ, ಏಪ್ರಿಲ್ 15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿಯಾಗಿದೆ. ಪ್ರಧಾನಿಯ ಸ್ವಾಗತಕ್ಕಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.

ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆರು ಎಸ್ಪಿಗಳು, ಎಂಟು ಎಎಸ್ಪಿಗಳು, 53 ಇನ್ಸ್‌ಪೆಕ್ಟರ್‌ಗಳು, 18 ಡಿವೈಎಸ್‌ಪಿಗಳು ಸೇರಿದಂತೆ ಒಟ್ಟು 1700ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮಠಕ್ಕೆ ಹೋಗುವ ರಸ್ತೆಗಳನ್ನು ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದ್ದು, ಎಸ್ಪಿಜಿ ಭದ್ರತೆಯ ಅಡಿಯಲ್ಲಿ ಸಂಪೂರ್ಣ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Apr 15, 2026 08:22 AM
Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More