ಭೂತಾನ್ಗೆ ಪ್ರಧಾನಿ ಮೋದಿ ಭೇಟಿ: ಪರ್ವತಗಳ ನಾಡಿನಲ್ಲಿ ಭಾರತದ ಸಂಸ್ಕೃತಿಯ ಅನಾವರಣ, ಮೋದಿ ಫಿದಾ
ಗುಜರಾತಿ ಹಾಡು ಮತ್ತು ಹಿಂದಿ ಹಾಡುಗಳಿಗೆ ಅಲ್ಲಿನ ಕಲಾವಿದರು ನೃತ್ಯ ಮಾಡಿದ್ದಾರೆ. ಈ ನೃತ್ಯಕ್ಕೆ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಭೂತಾನ್ ಭೇಟಿಯಲ್ಲಿರುವ ಪ್ರಧಾನಿ ಮೋದಿ ಅವರು ಭಾರತ-ಭೂತಾನ್ ಸಹಭಾಗಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರು ಇಂದು ಭೂತಾನ್ಗೆ (Bhutan) ಭೇಟಿ ನೀಡಿದ್ದರು. ಮೋದಿ ಅವರ ಮುಂದೆ ಭೂತಾನ್ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗುಜರಾತಿ ಹಾಡು ಮತ್ತು ಹಿಂದಿ ಹಾಡುಗಳಿಗೆ ಅಲ್ಲಿನ ಕಲಾವಿದರು ನೃತ್ಯ ಮಾಡಿದ್ದು, ಮೋದಿ ನೃತ್ಯದ ಬಗ್ಗೆ ಪ್ರಶಂಸೆಯನ್ನು ಕೂಡ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರ ಈ ಭೇಟಿ ಭಾರತ-ಭೂತಾನ್ ಸಹಭಾಗಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ತಮ್ಮ ಎರಡು ದಿನಗಳ ಭೇಟಿಯಲ್ಲಿ ಪ್ರಧಾನಿಯವರು ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್, ಮಾಜಿ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರನ್ನು ಭೇಟಿಯಾಗಿದ್ದಾರೆ. ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ. ಇದರ ಜತೆಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು ಸ್ವೀಕರಿಸಿದರು.