ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ ಪ್ರದರ್ಶನ

Updated on: Jul 25, 2025 | 5:58 PM

ಮಾಲ್ಡೀವ್ಸ್‌ಗೆ ಆಗಮಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಯಿಝು ಆತ್ಮೀಯ ಅಪ್ಪುಗೆಯ ಮೂಲಕ ಸ್ವಾಗತಿಸಿದರು. ಎರಡು ದಿನಗಳ ಯುನೈಟೆಡ್ ಕಿಂಗ್‌ಡಮ್ ಪ್ರವಾಸವನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮಾಲೆಗೆ ಬಂದಿಳಿದರು. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅಪ್ಪುಗೆಯ ಮೂಲಕ ಮೋದಿಯನ್ನು ಸ್ವಾಗತಿಸಿದರು. ಜೊತೆಗೆ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಹಣಕಾಸು ಸಚಿವರು ಮತ್ತು ಗೃಹ ಭದ್ರತಾ ಸಚಿವರು ಸೇರಿದಂತೆ ದೇಶದ ಹಿರಿಯ ಕ್ಯಾಬಿನೆಟ್ ಸದಸ್ಯರು ಕೂಡ ಮೋದಿಯ ಸ್ವಾಗತಕ್ಕೆ ಆಗಮಿಸಿದ್ದರು.

ಮಾಲೆ, ಜುಲೈ 25: ಮಾಲ್ಡೀವ್ಸ್‌ನ 60ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಾಲೆಗೆ ತಲುಪಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಅಧಿಕಾರಾವಧಿಯಲ್ಲಿ ಇಲ್ಲಿಗೆ ಭೇಟಿ ನೀಡಿದ ಮೊದಲ ವಿದೇಶಿ ರಾಷ್ಟ್ರದ ಮುಖ್ಯಸ್ಥರೆಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ (PM Modi in Maldives) ಪಾತ್ರರಾಗಿದ್ದಾರೆ. ಎರಡು ದಿನಗಳ ಯುನೈಟೆಡ್ ಕಿಂಗ್‌ಡಮ್ ಪ್ರವಾಸವನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮಾಲೆಗೆ ಬಂದಿಳಿದರು. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅಪ್ಪುಗೆಯ ಮೂಲಕ ಮೋದಿಯನ್ನು ಸ್ವಾಗತಿಸಿದರು. ಜೊತೆಗೆ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಹಣಕಾಸು ಸಚಿವರು ಮತ್ತು ಗೃಹ ಭದ್ರತಾ ಸಚಿವರು ಸೇರಿದಂತೆ ದೇಶದ ಹಿರಿಯ ಕ್ಯಾಬಿನೆಟ್ ಸದಸ್ಯರು ಕೂಡ ಮೋದಿಯ ಸ್ವಾಗತಕ್ಕೆ ಆಗಮಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಅಧಿಕೃತ ಭೇಟಿಯ ಸಂದರ್ಭದಲ್ಲಿ ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ಆರಂಭಿಸುತ್ತಿದ್ದಂತೆ ಶುಕ್ರವಾರ ಮಾಲೆಯ ಗಣರಾಜ್ಯ ಚೌಕದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮಕ್ಕಳು ನೃತ್ಯ ಪ್ರದರ್ಶಿಸಿದರು ಮತ್ತು ಔಪಚಾರಿಕ ಸ್ವಾಗತದ ನಂತರ ಉಭಯ ನಾಯಕರ ನಡುವೆ ಸಭೆ ನಡೆಯಿತು.

“ಮಾಲೆಯಲ್ಲಿ ಬಂದಿಳಿದೆ. ಅಧ್ಯಕ್ಷ ಮುಯಿಝು ಅವರು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಹೃದಯ ಸ್ಪರ್ಶಿಯಾಗಿತ್ತು. ಭಾರತ-ಮಾಲ್ಡೀವ್ಸ್ ಸ್ನೇಹವು ಮುಂಬರುವ ದಿನಗಳಲ್ಲಿ ಪ್ರಗತಿಯ ಹೊಸ ಎತ್ತರವನ್ನು ತಲುಪುತ್ತದೆ ಎಂದು ನನಗೆ ವಿಶ್ವಾಸವಿದೆ” ಎಂದು ಪ್ರಧಾನಿ ಮೋದಿ ಎಕ್ಸ್​ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ