ಶರದ್ ಪವಾರ್ಗೆ ಕುರ್ಚಿ ಹಾಕಿ, ನೀರು ನೀಡಿದ ಪ್ರಧಾನಿ ಮೋದಿ; ವಿಡಿಯೋ ವೈರಲ್
ಮರಾಠಿ ಸಾಹಿತ್ಯ ಕಾರ್ಯಕ್ರಮದಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ಕುರ್ಚಿಯನ್ನು ತಾವೇ ಸರಿಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೀರು ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಬೇಕಿದ್ದ ಪ್ರಧಾನಿ ಮೋದಿ, ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷ ಶರದ್ ಪವಾರ್ ಅವರನ್ನು ಕರೆದು ತಮ್ಮೊಂದಿಗೆ ದೀಪ ಬೆಳಗಿಸಲು ಮನವಿ ಮಾಡಿದರು.
ನವದೆಹಲಿ: ಇಂದು ನವದೆಹಲಿಯಲ್ಲಿ ನಡೆದ 98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಈ ವೇಳೆ ತಾವೇ ಹಿರಿಯ ರಾಜಕೀಯ ನಾಯಕ ಶರದ್ ಪವಾರ್ ಅವರ ಕುರ್ಚಿಯನ್ನು ಸರಿಪಡಿಸಿ, ಕುಡಿಯಲು ನೀರು ನೀಡಿದ್ದಾರೆ. ಎನ್‌ಸಿಪಿ (ಎಸ್‌ಪಿ) ನಾಯಕ ಶರದ್ ಪವಾರ್ ಈ ಕಾರ್ಯಕ್ರಮದ ಸಮಯದಲ್ಲಿ ಕುಳಿತುಕೊಳ್ಳಲು ಮುಂದಕ್ಕೆ ಹೋದಾಗ ಪ್ರಧಾನಿ ಮೋದಿ ಶರದ್ ಪವಾರ್ ಅವರ ಕುರ್ಚಿಯನ್ನು ಸರಿಪಡಿಸುತ್ತಿರುವುದನ್ನು ಕಾಣಬಹುದು. ಬಳಿಕ, ಪ್ರಧಾನಿ ಮೋದಿ ನೀರಿನ ಬಾಟಲಿಯನ್ನು ತೆರೆದು ಶರದ್ ಪವಾರ್ ಬಳಿ ಇರಿಸಲಾಗಿದ್ದ ಖಾಲಿ ಲೋಟದಲ್ಲಿ ನೀರು ಸುರಿದು ಅವರಿಗೆ ನೀಡಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ