ವಿಶ್ವವಿದ್ಯಾಲಯದಲ್ಲೂ ಧರ್ಮದ ಆಧಾರದಲ್ಲಿ ಮೀಸಲಾತಿ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

Lok Sabha Elections 2024: ದೆಹಲಿಯ ದ್ವಾರಕಾದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿರುವ ಪ್ರಧಾನಿ ಮೋದಿ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಹಿಂದುಳಿದವರು, ದಲಿತರಿಗೆ ಸಿಗಬೇಕಾಗಿದ್ದ ಮೀಸಲಾತಿಯನ್ನು ಕಸಿದುಕೊಂಡ ಕಾಂಗ್ರೆಸ್ ಮುಸ್ಲಿಮರಿಗೆ ನೀಡಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾಲಯದಲ್ಲೂ ಧರ್ಮದ ಆಧಾರದಲ್ಲಿ ಮೀಸಲಾತಿ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
|

Updated on:May 22, 2024 | 9:18 PM

ಚುನಾವಣಾ ಪ್ರಚಾರದ ವೇಳೆ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಯುನಿವರ್ಸಿಟಿಯ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸೆಂಟ್ರಲ್ ಯುನಿವರ್ಸಿಟಿಯಲ್ಲಿ ಮೊದಲು ದಲಿತರು, ಹಿಂದುಳಿದ ವರ್ಗದವರು, ಆದಿವಾಸಿ ಸಮುದಾಯದವರಿಗೆ ವಿದ್ಯಾಭ್ಯಾಸ ಸಿಗುತ್ತಿತ್ತು. ಆದರೆ, ಮನಮೋಹನ್ ಸಿಂಗ್ (Manmohan Singh) ಸರ್ಕಾರ ಅಧಿಕಾರಕ್ಕೆ ಬಂದ ನಂತರ 2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವನ್ನು ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆ ಎಂದು ಘೋಷಿಸಿತು. ಇದಾದ ನಂತರ ಶೇ. 50ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗುತ್ತಿದೆ. 2011ಕ್ಕೂ ಮೊದಲು ಎಲ್ಲ ಎಸ್​ಸಿ, ಎಸ್​ಟಿ, ಓಬಿಸಿಯವರಿಗೆ ಕೂಡ ಮೀಸಲಾತಿ ಸಿಗುತ್ತಿತ್ತು. ಶಿಕ್ಷಣ ಕ್ಷೇತ್ರದಲ್ಲಿ ಕೂಡ ಧರ್ಮದ ಆಧಾರದಲ್ಲಿ ಕಾಂಗ್ರೆಸ್ ಮೀಸಲಾತಿ ನೀಡಲಾರಂಭಿಸಿತು ಎಂದು ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Wed, 22 May 24

Follow us