PM Modi Brunei Visit: ಬ್ರೂನೈಗೆ ಆಗಮಿಸಿದ ಪ್ರಧಾನಿ ಮೋದಿ; ಕ್ರೌನ್ ಪ್ರಿನ್ಸ್ ಅವರಿಂದ ಭವ್ಯ ಸ್ವಾಗತ

|

Updated on: Sep 03, 2024 | 4:05 PM

ದ್ವಿಪಕ್ಷೀಯ ಭೇಟಿಗಾಗಿ ಬ್ರೂನೈಗೆ ಪ್ರಯಾಣಿಸಿದ ಮೊದಲ ಭಾರತೀಯ ಪ್ರಧಾನಿಯೆಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಎರಡೂ ದಶೇಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಮತ್ತು ರಾಜಮನೆತನದ ಇತರ ಸದಸ್ಯರೊಂದಿಗಿನ ಸಭೆಗಳನ್ನು ಮೋದಿ ನಡೆಸಲಿದ್ದಾರೆ.

ಬಂದರ್‌ಸೇರಿ ಬೇಗವಾನ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ದ್ವಿರಾಷ್ಟ್ರ ಪ್ರವಾಸದ ಮೊದಲ ಹಂತದಲ್ಲಿ ಬ್ರೂನೈಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ದೇಶದ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದಾರೆ ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಿದ್ದಾರೆ. ದ್ವಿಪಕ್ಷೀಯ ಭೇಟಿಗಾಗಿ ಬ್ರೂನೈಗೆ ಪ್ರಯಾಣಿಸಿದ ಮೊದಲ ಭಾರತೀಯ ಪ್ರಧಾನಿಯಾಗಿರುವ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.

 

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 03, 2024 04:03 PM