ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ

Updated on: Jul 06, 2026 | 6:59 PM

ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ರಾಜಧಾನಿ ಜಕಾರ್ತಾಕ್ಕೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಇಂಡೋನೇಷ್ಯಾದ ಅಧ್ಯಕ್ಷರಾದ ಪ್ರಬೋವೊ ಸುಬಿಯಾಂಟೊ ಅವರು ಬರಮಾಡಿಕೊಂಡರು. ಈ ಭೇಟಿಯ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಭಾರತದ ವಿದೇಶಾಂಗ ನೀತಿಯ ಪ್ರಮುಖ ಭಾಗವಾಗಿರುವ 'ಆಕ್ಟ್ ಈಸ್ಟ್ ಪಾಲಿಸಿ' ಅಡಿಯಲ್ಲಿ ಇಂಡೋನೇಷ್ಯಾ ಅತ್ಯಂತ ಪ್ರಮುಖ ದೇಶವಾಗಿದೆ.

ಜಕಾರ್ತ, ಜುಲೈ 6: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ತಮ್ಮ ಮೂರು ದೇಶಗಳ ಅಧಿಕೃತ ಪ್ರವಾಸದ ಮೊದಲ ಭಾಗವಾಗಿ ಇಂಡೋನೇಷ್ಯಾಕ್ಕೆ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ರಾಜಧಾನಿ ಜಕಾರ್ತಾಕ್ಕೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಇಂಡೋನೇಷ್ಯಾದ ಅಧ್ಯಕ್ಷರಾದ ಪ್ರಬೋವೊ ಸುಬಿಯಾಂಟೊ ಅವರು ಬರಮಾಡಿಕೊಂಡರು. ಈ ಭೇಟಿಯ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಹಿಂದೂ ಮಹಾಸಾಗರ ಮತ್ತು ಇಂಡೋ-ಪೆಸಿಫಿಕ್ ವಲಯದಲ್ಲಿ ಜಂಟಿ ಕಡಲ ಭದ್ರತೆಯನ್ನು ಬಲಪಡಿಸುವುದು, ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ, ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೂಡಿಕೆಯನ್ನು ಹೆಚ್ಚಿಸುವುದು, ಭಾರತದ ಯುಪಿಐನಂತಹ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಇಂಡೋನೇಷ್ಯಾದಲ್ಲಿ ಜಾರಿಗೆ ತರುವ ಕುರಿತು ಮಹತ್ವದ ಒಪ್ಪಂದಗಳು ಈ ಸಭೆಯಲ್ಲಿ ನಡೆಯುವ ಸಾಧ್ಯತೆಯಿದೆ.

ಭಾರತದ ವಿದೇಶಾಂಗ ನೀತಿಯ ಪ್ರಮುಖ ಭಾಗವಾಗಿರುವ ‘ಆಕ್ಟ್ ಈಸ್ಟ್ ಪಾಲಿಸಿ’ ಅಡಿಯಲ್ಲಿ ಇಂಡೋನೇಷ್ಯಾ ಅತ್ಯಂತ ಪ್ರಮುಖ ದೇಶವಾಗಿದೆ. ಆಸಿಯಾನ್ (ASEAN) ಒಕ್ಕೂಟದ ಪ್ರಬಲ ರಾಷ್ಟ್ರವಾಗಿರುವ ಇಂಡೋನೇಷ್ಯಾದೊಂದಿಗೆ ಬಾಂಧವ್ಯ ವೃದ್ಧಿಸುವುದು ಜಾಗತಿಕ ರಾಜತಾಂತ್ರಿಕತೆಯಲ್ಲಿ ಭಾರತಕ್ಕೆ ಅತ್ಯಂತ ನಿರ್ಣಾಯಕವಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

(Video Source: DD News)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 06, 2026 06:58 PM
Follow Us