ರಷ್ಯಾದಲ್ಲಿ ಪ್ರಧಾನಿ ಮೋದಿ; ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5.10ಕ್ಕೆ ಮಾಸ್ಕೋದ ವ್ನುಕೊವೊ-II ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರನ್ನು ರಷ್ಯಾದ ಮೊದಲ ಉಪ ಪ್ರಧಾನ ಮಂತ್ರಿ ಡೆನಿಸ್ ಮಂಟುರೊವ್ ಅವರು ಬರಮಾಡಿಕೊಂಡಿದ್ದಾರೆ. ಈ ವೇಳೆ ರಷ್ಯಾದಲ್ಲಿನ ಭಾರತೀಯರು ಸಾಂಪ್ರದಾಯಿಕ ನೃತ್ಯದ ಮೂಲಕ ಮೋದಿಯನ್ನು ಸ್ವಾಗತಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಎರಡು ದಿನಗಳ ಭೇಟಿಗಾಗಿ ರಷ್ಯಾದ ಮಾಸ್ಕೋಗೆ ಆಗಮಿಸಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಹಲವಾರು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಸುಮಾರು 5 ವರ್ಷಗಳ ನಂತರ ಪ್ರಧಾನಿ ಮೋದಿಯವರ ರಷ್ಯಾ ಭೇಟಿ ಇದಾಗಿದೆ.
ಇಂದು ಬೆಳಗ್ಗೆ 10.30ಕ್ಕೆ ದೆಹಲಿಯಿಂದ ವಿಮಾನ ಹತ್ತಿದ ಪ್ರಧಾನಿ ಮೋದಿ ಇಂದು ಸಂಜೆ 5.10ಕ್ಕೆ ಮಾಸ್ಕೋದ ವ್ನುಕೊವೊ-II ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ರಷ್ಯಾದ ಮೊದಲ ಉಪ ಪ್ರಧಾನ ಮಂತ್ರಿ ಡೆನಿಸ್ ಮಂಟುರೊವ್ ಅವರು ಬರಮಾಡಿಕೊಂಡರು. ಮಾಸ್ಕೋಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ರಷ್ಯಾ ಪಡೆಗಳಿಂದ ಗೌರವ ಸಲ್ಲಿಸಲಾಯಿತು.
ಈ ವೇಳೆ ರಷ್ಯಾದಲ್ಲಿನ ಭಾರತೀಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಹಾಗೇ, ಭಾರತೀಯ ಸಾಂಪ್ರದಾಯಿಕ ನೃತ್ಯ ಪ್ರದರ್ಶನದ ಮೂಲಕ ಅವರನ್ನು ಸ್ವಾಗತಿಸಿದರು. ಇದೇ ವೇಳೆ ರಷ್ಯನ್ ಯುವತಿಯರು ಕೂಡ ಹಿಂದಿ ಗೀತೆಗಳಿಗೆ ಡ್ಯಾನ್ಸ್ ಮಾಡಿದ್ದು ವಿಶೇಷವಾಗಿತ್ತು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ