3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್‌ಗೆ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತಕ್ಕಾಗಿ ಇಂದು ಮಸ್ಕತ್ ತಲುಪಿದರು. ಅವರನ್ನು ಒಮನ್‌ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಬರಮಾಡಿಕೊಂಡರು. ಸುಮಾರು 7 ಲಕ್ಷ ಭಾರತೀಯರು ವಾಸಿಸುವ ಒಮಾನ್‌ಗೆ ಇದು ಮೋದಿ ಅವರ ಎರಡನೇ ಭೇಟಿಯಾಗಿದೆ.
ದುಬೈ, ಡಿಸೆಂಬರ್ 17: ಪ್ರಧಾನಿ ನರೇಂದ್ರ ಮೋದಿ (PM Modi in Oman) ಇಂದು ಒಮನ್‌ಗೆ ತೆರಳಿದ್ದಾರೆ. ಇದು ಅವರ ಮೂರು ರಾಷ್ಟ್ರಗಳ ಮಹತ್ವದ ಪ್ರವಾಸದ ಕೊನೆಯ ಹಂತವಾಗಿದೆ. ಭಾರತೀಯ ಪ್ರಧಾನಿ ಮತ್ತು ಅವರ ಜೊತೆಗಿದ್ದ ನಿಯೋಗವನ್ನು ಒಮನ್‌ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಮಸ್ಕತ್‌ನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ ಅವರು ಘನತೆವೆತ್ತ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆಗಳನ್ನು ನಡೆಸಲಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ