PM Modi Uzbekistan Visit: ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ

Updated on: Aug 29, 2026 | 7:20 PM

ಉಜ್ಬೇಕಿಸ್ತಾನ್‌ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಜ್ಬೇಕಿಸ್ತಾನ್‌ಗೆ ಅಧಿಕೃತ ಭೇಟಿ ನೀಡಿದ್ದು, ಇದು ಅವರ 4ನೇ ಉಜ್ಬೇಕಿಸ್ತಾನ್ ಪ್ರವಾಸವಾಗಿದೆ. ಇಂದು ತಾಷ್ಕೆಂಟ್‌ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕ ಹಾಗೂ ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿರುವ ಮಹಾತ್ಮ ಗಾಂಧಿ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

ತಾಷ್ಕೆಂಟ್, ಆಗಸ್ಟ್ 29: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in Uzbekistan) ಇಂದು (ಶನಿವಾರ) ಸಂಜೆ ಉಜ್ಬೇಕಿಸ್ತಾನ್‌ನ ರಾಜಧಾನಿ ತಾಷ್ಕೆಂಟ್‌ಗೆ ತಲುಪಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ಹೊರಟಿದ್ದ ಅವರು ಉಜ್ಬೇಕಿಸ್ತಾನ್‌ ತಲುಪುತ್ತಿದ್ದಂತೆ ಅಲ್ಲಿನ ಸಚಿವರ ನಿಯೋಗ ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿತು. ಈ ಭೇಟಿಯ ವೇಳೆ ನರೇಂದ್ರ ಮೋದಿ ಉಜ್ಬೇಕಿಸ್ತಾನ್‌ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉಭಯ ನಾಯಕರು ವ್ಯಾಪಾರ-ಹೂಡಿಕೆ, ರಕ್ಷಣೆ, ಡಿಜಿಟಲ್ ಸಂಪರ್ಕ, ಇಂಧನ, ಶಿಕ್ಷಣ ಹಾಗೂ ಸಾರ್ವಜನಿಕ ಸಂಬಂಧಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಉಜ್ಬೇಕಿಸ್ತಾನ್‌ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಜ್ಬೇಕಿಸ್ತಾನ್‌ಗೆ ಅಧಿಕೃತ ಭೇಟಿ ನೀಡಿದ್ದು, ಇದು ಅವರ 4ನೇ ಉಜ್ಬೇಕಿಸ್ತಾನ್ ಪ್ರವಾಸವಾಗಿದೆ. ಇಂದು ತಾಷ್ಕೆಂಟ್‌ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕ ಹಾಗೂ ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿರುವ ಮಹಾತ್ಮ ಗಾಂಧಿ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More