ಭಜನ್ ಕ್ಲಬ್ಬಿಂಗ್​ನಲ್ಲಿ ಮೋದಿ; ಯುವಕರ ಜೊತೆ ಭಕ್ತಿಗೀತೆಗೆ ತಾಳ ಹಾಕಿದ ಪ್ರಧಾನಿ 

Updated on: Sep 25, 2026 | 10:29 PM

ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆಯ ಅಂಗವಾಗಿ ಇಂದು ಸಂಜೆ ದೆಹಲಿಯ 'ದೀನ್ ದಯಾಳ್ ಉಪಾಧ್ಯಾಯ ಪಾರ್ಕ್'ನಲ್ಲಿ ಆಯೋಜಿಸಲಾಗಿದ್ದ ‘ಭಜನ್ ಕ್ಲಬ್ಬಿಂಗ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಧಾನಿ ಮೋದಿ ಅವರು ಪ್ರೇಕ್ಷಕರ ಮುಂಭಾಗದ ಸಾಲಿನಲ್ಲಿ ಕುಳಿತು ಭಕ್ತಿಗೀತೆಗಳನ್ನು ಆಲಿಸುತ್ತಾ, ಎಂಜಾಯ್ ಮಾಡುತ್ತಿರುವುದನ್ನು ನೋಡಬಹುದು. ವೇದಿಕೆಯ ಮೇಲಿದ್ದ ಗಾಯಕರು ಮತ್ತು ಸಂಗೀತಗಾರರು ಕೇಸರಿ ಬಣ್ಣದ ಉಡುಪುಗಳನ್ನು ಧರಿಸಿ ಸಾಂಪ್ರದಾಯಿಕ ಹಾಗೂ ಆಧುನಿಕ ಶೈಲಿಯ ಸಂಯೋಜನೆಯಲ್ಲಿ ಭಕ್ತಿಗೀತೆಗಳನ್ನು (ಭಜನೆ) ಪ್ರಸ್ತುತಪಡಿಸಿದರು.

ನವದೆಹಲಿ, ಸೆಪ್ಟೆಂಬರ್ 25: ಭಾರತೀಯ ಜನಸಂಘದ ಪ್ರಮುಖ ನಾಯಕ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆಯ ಅಂಗವಾಗಿ ಇಂದು ಸಂಜೆ ದೆಹಲಿಯ ‘ದೀನ್ ದಯಾಳ್ ಉಪಾಧ್ಯಾಯ ಪಾರ್ಕ್’ನಲ್ಲಿ ಆಯೋಜಿಸಲಾಗಿದ್ದ ‘ಭಜನ್ ಕ್ಲಬ್ಬಿಂಗ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಧಾನಿ ಮೋದಿ ಅವರು ಪ್ರೇಕ್ಷಕರ ಮುಂಭಾಗದ ಸಾಲಿನಲ್ಲಿ ಕುಳಿತು ಭಕ್ತಿಗೀತೆಗಳನ್ನು ಆಲಿಸುತ್ತಾ, ಎಂಜಾಯ್ ಮಾಡುತ್ತಿರುವುದನ್ನು ನೋಡಬಹುದು. ವೇದಿಕೆಯ ಮೇಲಿದ್ದ ಗಾಯಕರು ಮತ್ತು ಸಂಗೀತಗಾರರು ಕೇಸರಿ ಬಣ್ಣದ ಉಡುಪುಗಳನ್ನು ಧರಿಸಿ ಸಾಂಪ್ರದಾಯಿಕ ಹಾಗೂ ಆಧುನಿಕ ಶೈಲಿಯ ಸಂಯೋಜನೆಯಲ್ಲಿ ಭಕ್ತಿಗೀತೆಗಳನ್ನು (ಭಜನೆ) ಪ್ರಸ್ತುತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಳಿ ಬಣ್ಣದ ಕುರ್ತಾ-ಪೈಜಾಮಾದ ಮೇಲೆ ಕಿತ್ತಳೆ ಬಣ್ಣದ ವೇಸ್ಟ್‌ಕೋಟ್ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಸ್ಮರಣಾರ್ಥ ಈ ವಿಶೇಷ ಸಾಂಸ್ಕೃತಿಕ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 25, 2026 10:28 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More