ದೆಹಲಿಯ ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ
ಕ್ರಿಸ್ಮಸ್ 2025: ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ದೇಶದ ಜನತೆಗೆ ಶುಭ ಹಾರೈಸಿದರು. ಇದೇ ವೇಳೆ, ಬಿಷಪ್ ಡಾ. ಪಾಲ್ ಸ್ವರೂಪ್ ಪ್ರೈಮ್ ಮಿನಿಸ್ಟರ್ಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಡಿಯೋ ಇಲ್ಲಿದೆ ನೋಡಿ.
ನವದೆಹಲಿ, ಡಿಸೆಂಬರ್ 25: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಂದೇಶದಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ.
(ವಿಡಿಯೋ ಕೃಪೆ: ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್ ಖಾತೆ)
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ