ಮುಂಬೈನಲ್ಲಿ ನಡೆದ ಸಾಗರ ನಾಯಕರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

Updated on: Oct 29, 2025 | 6:16 PM

ಇಂಡಿಯಾ ಮ್ಯಾರಿಟೈಮ್ ವೀಕ್​ನಲ್ಲಿ ಪ್ರಮುಖ ಹಡಗು ಸಾಗಣೆ, ಹಡಗು ನಿರ್ಮಾಣ ಉಪಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಮುಂಬೈನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮ್ಯಾರಿಟೈಮ್ ವೀಕ್ (MW) 2025ರಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಮ್ಯಾರಿಟೈಮ್ ಲೀಡರ್ಸ್ ಕಾನ್ಕ್ಲೇವ್ ಅನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದಾರೆ.

ಮುಂಬೈ, ಅಕ್ಟೋಬರ್ 29: ಮಹಾರಾಷ್ಟ್ರದ ಮುಂಬೈನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ (PM Modi) ಇಂಡಿಯಾ ಮ್ಯಾರಿಟೈಮ್ ವೀಕ್ (MW) 2025ರಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಮ್ಯಾರಿಟೈಮ್ ಲೀಡರ್ಸ್ ಕಾನ್ಕ್ಲೇವ್ ಅನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದಾರೆ. ಈ ವೇಳೆ ಮಾತನಾಡಿದ ಮೋದಿ, “ಭಾರತದಲ್ಲಿ ನಿರ್ಮಿಸಲಾದ ಹಡಗುಗಳು ಜಾಗತಿಕ ವ್ಯಾಪಾರದ ಪ್ರಮುಖ ಭಾಗವಾಗಿದ್ದವು. ಈಗ ಭಾರತ ಮತ್ತೊಮ್ಮೆ ಹಡಗು ನಿರ್ಮಾಣ ಕ್ಷೇತ್ರದಲ್ಲಿ ಹೊಸ ಎತ್ತರವನ್ನು ಏರುವ ಪ್ರಯತ್ನಗಳನ್ನು ವೇಗಗೊಳಿಸುತ್ತಿದೆ. ದೇಶವು ಈಗ ದೊಡ್ಡ ಹಡಗುಗಳಿಗೆ ಮೂಲಸೌಕರ್ಯ ಆಸ್ತಿಗಳ ಸ್ಥಾನಮಾನವನ್ನು ನೀಡಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ