PM Modi In ISRO: ವಿಜ್ಞಾನಿಗಳ ಸಾಧನೆಗೆ ಸೆಲ್ಯೂಟ್ ಹೊಡೆದು ಭಾವುಕರಾದ ಪ್ರಧಾನಿ ಮೋದಿ
ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ವಿಜ್ಞಾನಿಗಳ ಸಾಧನೆ ನೆನೆದು ಮೋದಿ ಭಾವುಕರಾದರು. ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್. ನಿಮ್ಮ ಧೈರ್ಯ, ಶಕ್ತಿ, ಶ್ರಮ, ಸಾಮರ್ಥ್ಯಕ್ಕೆ ನನ್ನ ನಮನಗಳು. ಭಾರತದ ವೈಜ್ಞಾನಿಕ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತಿದೆ. ಸದ್ಯ ಭಾರತ ಚಂದ್ರನ ಮೇಲಿದೆ. ದೇಶದ ಘನತೆಯನ್ನು ಉತ್ತುಂಗಕ್ಕೇರಿಸಿದ್ದಕ್ಕೆ ಧನ್ಯವಾದಗಳು ಎಂದರು.
ಬೆಂಗಳೂರು, ಆ.26: ಚಂದ್ರಯಾನ 3 ರ(Chandrayaan 3) ಯಶಸ್ವಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಶನಿವಾರ ಪೀಣ್ಯದ ಇಸ್ರೋ, ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ಐಸ್ಟ್ರಾಕ್) ಗೆ ಭೇಟಿ ನೀಡಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ವಿಜ್ಞಾನಿಗಳ ಸಾಧನೆ ನೆನೆದು ಪ್ರಧಾನಮಂತ್ರಿ ಮೋದಿ ಭಾವುಕರಾದರು. ನಿಮ್ಮನ್ನು ಭೇಟಿಯಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ ಎಂದು ವಿಜ್ಞಾನಿಗಳ ಸಾಧನೆ ನೆನೆದು ಮೋದಿ ಭಾವುಕರಾದರು.
ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್. ನಿಮ್ಮ ಧೈರ್ಯ, ಶಕ್ತಿ, ಶ್ರಮ, ಸಾಮರ್ಥ್ಯಕ್ಕೆ ನನ್ನ ನಮನಗಳು. ಭಾರತದ ವೈಜ್ಞಾನಿಕ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತಿದೆ. ಸದ್ಯ ಭಾರತ ಚಂದ್ರನ ಮೇಲಿದೆ. ದೇಶದ ಘನತೆಯನ್ನು ಉತ್ತುಂಗಕ್ಕೇರಿಸಿದ್ದಕ್ಕೆ ಧನ್ಯವಾದಗಳು ಎಂದರು.
Latest Videos