ಪ್ರಧಾನಿ ನರೇಂದ್ರ ಮೋದಿ ಅವರು 56 ವರ್ಷಗಳಲ್ಲಿ ಗಯಾನಾಕ್ಕೆ ಭೇಟಿ ನೀಡಿದ ಮೊದಲ ಭಾರತ ಪ್ರಧಾನಿ ಎನಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ ಬಿಗಿದಪ್ಪಿ ಅವರನ್ನು ತಮ್ಮ ದೇಶಕ್ಕೆ ಸ್ವಾಗತಿಸಿದರು. ಇರ್ಫಾನ್ ಅಲಿ ತನ್ನ 12 ಸಂಪುಟ ಸಚಿವರೊಂದಿಗೆ ವಿಮಾನ ನಿಲ್ದಾಣ ತಲುಪಿದ್ದರು. ಪ್ರಧಾನಿ ಮೋದಿ ಅವರು ಗಯಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗಯಾನಾವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಮತ್ತು ಭವಿಷ್ಯದಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಅವರೊಂದಿಗೆ ಪಾಲುದಾರರಾಗಲು ಅವಕಾಶವನ್ನು ಪಡೆಯುವುದರಲ್ಲಿ ಸಂಶಯವಿಲ್ಲ.
ಇಂಧನ, ರಕ್ಷಣೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿಸಲಾಗುವುದು. ಜಾರ್ಜ್‌ಟೌನ್‌ನಲ್ಲಿ ನಡೆಯಲಿರುವ ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆ ಇದಾಗಿದೆ. ಈ ಹಿಂದೆ, 2023 ರಲ್ಲಿ ಭಾರತದಲ್ಲಿ ನಡೆದ 17 ನೇ ಪ್ರವಾಸಿ ಭಾರತೀಯ ದಿವಸ್‌ನಲ್ಲಿ ಸಭೆಯನ್ನು ನಡೆಸಲಾಗಿತ್ತು.
ಇದೇ ಸಭೆಯಲ್ಲಿ ಅಧ್ಯಕ್ಷ ಅಲಿ ಅವರಿಗೆ ಪ್ರವಾಸಿ ಭಾರತೀಯ ಸಮ್ಮಾನ್ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯು ಅನಿವಾಸಿ ಭಾರತೀಯರು ಮತ್ತು ಭಾರತ ಮೂಲದ ಜನರಿಗೆ ಭಾರತವು ನೀಡುವ ಅತ್ಯುನ್ನತ ಗೌರವವಾಗಿದೆ. ಗಯಾನಾ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇದು ಉಭಯ ದೇಶಗಳ ನಡುವಿನ ಪ್ರಜಾಸತ್ತಾತ್ಮಕ ಬಾಂಧವ್ಯ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ತೋರಿಸುತ್ತದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ