AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಭಗವಾನ್ ಬಸವೇಶ್ವರರ ಆಶೀರ್ವಾದ ಮತ್ತು ಜನರ ಪ್ರೀತಿಯಿಂದ ಕೆಲಸ ಮಾಡುವ ಶಕ್ತಿ ಸಿಗುತ್ತದೆ: ಪ್ರಧಾನಿ ನರೇಂದ್ರ ಮೋದಿ

Karnataka Assembly Polls; ಭಗವಾನ್ ಬಸವೇಶ್ವರರ ಆಶೀರ್ವಾದ ಮತ್ತು ಜನರ ಪ್ರೀತಿಯಿಂದ ಕೆಲಸ ಮಾಡುವ ಶಕ್ತಿ ಸಿಗುತ್ತದೆ: ಪ್ರಧಾನಿ ನರೇಂದ್ರ ಮೋದಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 29, 2023 | 12:56 PM

Share

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯವನ್ನು ಬೀದರ್ ಜಿಲ್ಲೆಯಿಂದ ಪ್ರಾರಂಭಿಸುವ ಅವಕಾಶ ಸಿಕ್ಕಿದ್ದು ತಮ್ಮ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು.

ಹುಮನಾಬಾದ್ (ಬೀದರ್): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕರ್ನಾಟಕಕ್ಕೆ ಭೇಟಿ ನೀಡಿದಾಗೆಲ್ಲ ಮಾಡುವಂತೆ ಕನ್ನಡದಲ್ಲೇ ಭಾಷಣ ಆರಂಭಿಸಿದರು. ಹುಮನಾಬಾದ್ ಚಿನಕೇರಾ ಕ್ರಾಸ್ (Chinkera Cross) ಬಳಿ ನಡೆದ ಬೃಹತ್ ಸಮಾವೇಶದಲ್ಲಿ ಮಾತಾಡಿದ ಪ್ರಧಾನಿ ಮೋದಿ, ಜಗದ್ಗುರು ಬಸವೇಶ್ವರ (Jagadguru Basaveshwara), ಶಿವಶರಣ ಮತ್ತು ಶರಣೆಯರ ನಾಡಿಗೆ ನನ್ನ ನಮಸ್ಕಾರಗಳು ಅಂತ ಹೇಳುತ್ತಾ ಮಾತು ಶುರು ಮಾಡಿದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯವನ್ನು ಬೀದರ್ ಜಿಲ್ಲೆಯಿಂದ ಪ್ರಾರಂಭಿಸುವ ಅವಕಾಶ ಸಿಕ್ಕಿದ್ದು ತಮ್ಮ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ಭಗವಾನ್ ಬಸವೇಶ್ವರರ ಆಶೀರ್ವಾದ ಮತ್ತು ಜನ ತೋರುವ ಪ್ರೀತಿಯಿಂದ ಜನರಿಗಾಗಿ ಕೆಲಸ ಮಾಡಲು ತನಗೆ ಶಕ್ತಿ ಸಿಗುತ್ತದೆ ಎಂದು ಪ್ರಧಾನಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ