ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

Updated on: Apr 24, 2026 | 4:02 PM

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮೊದಲ ಹಂತದ ಮತದಾನವನ್ನು ಟಿಎಂಸಿಯ 'ಜಂಗಲ್ ರಾಜ್'ನ 'ಅಂತ್ಯದ ಆರಂಭ' ಎಂದು ಕರೆದಿದ್ದಾರೆ. ಇಂದು ಬಂಗಾಳದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಟಿಎಂಸಿ ಮಹಿಳೆಯರು ಬೆಳೆಯುವುದನ್ನು ಬಯಸುವುದಿಲ್ಲ. ಆದರೆ, ಮಹಿಳೆಯರ ಸುರಕ್ಷತೆಯೇ ಬಿಜೆಪಿಯ ಆದ್ಯತೆ ಎಂದು ಹೇಳಿದ್ದಾರೆ.

ಕೊಲ್ಕತ್ತಾ, ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ದಾಖಲೆಯ ಮತದಾನವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಜಂಗಲ್ ರಾಜ್​ನ ಅಂತ್ಯದ ಆರಂಭ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರರೆ. ಮೇ 4ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ಖಂಡಿತವಾಗಿಯೂ ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಮಹಿಳಾ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಟಿಎಂಸಿಯನ್ನು ಮಹಿಳಾ ವಿರೋಧಿ ಪಕ್ಷ ಎಂದು ಮೋದಿ ಟೀಕಿಸಿದ್ದಾರೆ. ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿಎಂಸಿ ಮಹಿಳೆಯರು ಬೆಳೆಯುವುದನ್ನು ಬಯಸುವುದಿಲ್ಲ. ಆದರೆ, ಮಹಿಳೆಯರ ಸುರಕ್ಷತೆಯೇ ಬಿಜೆಪಿಯ ಆದ್ಯತೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಮೊದಲ ಸಂಪುಟ ಸಭೆಯ ನಂತರ ಪಶ್ಚಿಮ ಬಂಗಾಳದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ಫಲಾನುಭವಿಗಳಿಗೆ 5 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗುವುದು. ಬಿಜೆಪಿ ಕೊನೆಯ ಹಂತದ ವಿತರಣೆಯ ಮೇಲೆ ಕೇಂದ್ರೀಕರಿಸಿದೆ. ಅದಕ್ಕಾಗಿಯೇ ಅದು ನಿರಂತರವಾಗಿ ಜನರ ಬೆಂಬಲವನ್ನು ಪಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us