PM Narendra Modi: ಸುಡಾನ್​​ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ಸಿದ್ಧತೆ: ಪ್ರಧಾನಿ ಮೋದಿ

ಕಿರಣ್​ ಐಜಿ

Updated on: Apr 22, 2023 | 6:07 PM

ಸಭೆಯಲ್ಲಿ ಮೋದಿಯವರು ಸುಡಾನ್​​ನಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವರದಿಯನ್ನು ಕೇಳಿದ್ದು, ಅಲ್ಲಿರುವ 3,000ಕ್ಕಿಂತಲೂ ಹೆಚ್ಚು ಭಾರತೀಯರ ಸುರಕ್ಷೆ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ. ಕಳೆದ ವಾರ ಸುಡಾನ್​​ನಲ್ಲಿ ಗುಂಡಿನ ದಾಳಿಗೆ ಬಲಿಯಾದ ಭಾರತೀಯರ ಸಾವಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂಘರ್ಷ ಪೀಡಿತ ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರಿ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು. ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್​​ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಮೋದಿಯವರು ಸುಡಾನ್​​ನಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವರದಿಯನ್ನು ಕೇಳಿದ್ದು, ಅಲ್ಲಿರುವ 3,000ಕ್ಕಿಂತಲೂ ಹೆಚ್ಚು ಭಾರತೀಯರ ಸುರಕ್ಷೆ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ. ಕಳೆದ ವಾರ ಸುಡಾನ್​​ನಲ್ಲಿ ಗುಂಡಿನ ದಾಳಿಗೆ ಬಲಿಯಾದ ಭಾರತೀಯರ ಸಾವಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.