ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ; ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Updated on: Dec 18, 2025 | 5:35 PM

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿಯ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮಸ್ಕತ್‌ನಲ್ಲಿ ಓಮನ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು. ಪ್ರಧಾನಿ ಮೋದಿಗೆ ದಿ ಫಸ್ಟ್ ಕ್ಲಾಸ್ ಆಫ್ ದಿ ಆರ್ಡರ್ ಆಫ್ ಓಮನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಹಿಂದೆ ರಾಣಿ ಎಲಿಜಬೆತ್, ರಾಣಿ ಮ್ಯಾಕ್ಸಿಮ್, ಚಕ್ರವರ್ತಿ ಅಕಿಹಿಟೊ, ನೆಲ್ಸನ್ ಮಂಡೇಲಾ, ಜೋರ್ಡಾನ್‌ನ ಕೈಂಡ್ ಅಬ್ದುಲ್ಲಾ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಧಾನಿ ಮೋದಿಗೆ ಇದು 29ನೇ ಜಾಗತಿಕ ಗೌರವವಾಗಿದೆ.

ಮಸ್ಕತ್, ಡಿಸೆಂಬರ್ 18: ಭಾರತ-ಓಮನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಮೋದಿ ಅವರ ಪಾತ್ರವನ್ನು ಗುರುತಿಸಿ ಮಸ್ಕತ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ (PM Modi in Oman) ಅವರಿಗೆ ಸುಲ್ತಾನರ ವಿಶಿಷ್ಟ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ಪ್ರದಾನ ಮಾಡಿದರು.

ಈ ಪ್ರಶಸ್ತಿಯನ್ನು ಈ ಮೊದಲು ರಾಣಿ ಎಲಿಜಬೆತ್ II, ನೆದರ್ಲ್ಯಾಂಡ್ಸ್‌ನ ರಾಣಿ ಮ್ಯಾಕ್ಸಿಮಾ, ಜಪಾನ್‌ನ ಚಕ್ರವರ್ತಿ ಅಕಿಹಿಟೊ, ನೆಲ್ಸನ್ ಮಂಡೇಲಾ ಮತ್ತು ಜೋರ್ಡಾನ್ ರಾಜ ಅಬ್ದುಲ್ಲಾ ಅವರಂತಹ ಗಣ್ಯರಿಗೆ ನೀಡಲಾಗಿತ್ತು. ಆ ಸಾಲಿಗೆ ಇದೀಗ ಪ್ರಧಾನಿ ಮೋದಿಯೂ ಸೇರಿದ್ದಾರೆ. ಮೋದಿಯವರಿಗೆ ಇದು 29ನೇ ಜಾಗತಿಕ ಗೌರವವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More