Video: ಘಾನಾ ಸೇರಿ 5 ರಾಷ್ಟ್ರಗಳಿಗೆ ಪ್ರವಾಸ ಹೊರಟ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಘಾನಾ ಸೇರಿ ಐದು ರಾಷ್ಟ್ರಗಳಿಗೆ ಪ್ರವಾಸ ಹೊರಟಿದ್ದಾರೆ. ವಿದೇಶ ಪ್ರವಾಸ ಕೈಗೊಳ್ಳಲಿರುವ ಮೋದಿ ಮೊದಲು ಘಾನಾ ದೇಶಕ್ಕೆ ಭೇಟಿ ನೀಡಲಿದ್ದಾರೆ. ಕಳೆದ 30 ವರ್ಷಗಳಲ್ಲಿ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಜುಲೈ 2-3ರಂದು ನಡೆಯುವ ಈ ಭೇಟಿಯಲ್ಲಿ ಘಾನಾದ ರಾಷ್ಟ್ರಪತಿ ಜಾನ್ ಡ್ರಮಾನಿ ಮಹಾಮಾರೊಡನೆ ಮಾತುಕತೆ ನಡೆಸಲಿದ್ದಾರೆ. ಲಸಿಕೆ ಉತ್ಪಾದನಾ ಕೇಂದ್ರ ಸ್ಥಾಪನೆ, ಆರ್ಥಿಕ ಸಹಕಾರ, ಡಿಜಿಟಲ್ ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ವೃದ್ಧಿಗೊಳಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ.
ನವದೆಹಲಿ, ಜುಲೈ 02: ಪ್ರಧಾನಿ ನರೇಂದ್ರ ಮೋದಿ(Narendra Modi) ಘಾನಾ ಸೇರಿ ಐದು ರಾಷ್ಟ್ರಗಳಿಗೆ ಪ್ರವಾಸ ಹೊರಟಿದ್ದಾರೆ. ವಿದೇಶ ಪ್ರವಾಸ ಕೈಗೊಳ್ಳಲಿರುವ ಮೋದಿ ಮೊದಲು ಘಾನಾ ದೇಶಕ್ಕೆ ಭೇಟಿ ನೀಡಲಿದ್ದಾರೆ. ಕಳೆದ 30 ವರ್ಷಗಳಲ್ಲಿ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಜುಲೈ 2-3ರಂದು ನಡೆಯುವ ಈ ಭೇಟಿಯಲ್ಲಿ ಘಾನಾದ ರಾಷ್ಟ್ರಪತಿ ಜಾನ್ ಡ್ರಮಾನಿ ಮಹಾಮಾರೊಡನೆ ಮಾತುಕತೆ ನಡೆಸಲಿದ್ದಾರೆ. ಲಸಿಕೆ ಉತ್ಪಾದನಾ ಕೇಂದ್ರ ಸ್ಥಾಪನೆ, ಆರ್ಥಿಕ ಸಹಕಾರ, ಡಿಜಿಟಲ್ ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ವೃದ್ಧಿಗೊಳಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ.
ಜತೆಗೆ ಟ್ರಿನಿಡಾಡ್ ಮತ್ತು ಟೊಬಾಗೊ,ಅರ್ಜೆಂಟೀನಾ, ಬ್ರೆಜಿಲ್, ನಮೀಬಿಯಾಗೂ ಭೇಟಿ ನೀಡಲಿದ್ದಾರೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಮೇ 7ರಂದು ಪಾಕಿಸ್ತಾನದಲ್ಲಿನ ಉಗ್ರರ ತಾಣಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ನಡೆಸಿತ್ತು. . ಈ ಭೇಟಿಯು ಪ್ರಮುಖವಾಗಿ ಈ ಕಾರ್ಯಾಚರಣೆಗೆ ಸಂಬಂಧಿಸಿದೆ. ಭಾರತವು ಜಾಗತಿಕ ಬೆಂಬಲ ಕೋರಲಿದೆ.
ಪ್ರಧಾನಿ ಮೋದಿ ಘಾನಾಗೆ ಹೊರಡುವ ಮುನ್ನ ಹೇಳಿದ್ದೇನು?
ಪ್ರಧಾನಿ ಮೋದಿ ಜುಲೈ 2-9ರವರೆಗೆ ಐದು ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸಹಕಾರ, ಭಯೋತ್ಪಾದನೆ ನಿಗ್ರಹ ಮತ್ತು ಜಾಗತಿಕ ದಕ್ಷಿಣದೊಂದಿಗೆ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಬಲವಾದ ಒತ್ತು ನೀಡಲಿದ್ದಾರೆ. ಘಾನಾಗೆ ಹೊರಡುವ ಮುನ್ನ ಮೋದಿ ಹೇಳಿಕೆ ಬಿಡುಗಡೆ ಮಾಡಿದ್ದು, ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಗೆ ಭೇಟಿ ನೀಡಲಿದ್ದು, ಇದು ಜುಲೈ 6 ಮತ್ತು 7 ರಂದು ರಿಯೊ ಡಿ ಜನೈರೊದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯಲ್ಲಿ ಮುಕ್ತಾಯಗೊಳ್ಳಲಿದೆ.
ಜುಲೈ 3-4ರಂದು ಮೋದಿ ಟ್ರಿನಿಡಾಡ್ ಮತ್ತು ಟೊಬಾಗೊ ದೇಶಕ್ಕೆ ಭೇಟಿ ನೀಡಲಿದ್ದೇನೆ ಎಂದು ಮೋದಿ ಹೇಳಿದ್ದಾರೆ. 1999ರ ನಂತರ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಜುಲೈ 4-5ರಂದು, ಅರ್ಜೆಂಟೀನಾಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಜೇವಿಯರ್ ಮಿಲೇ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದೇನೆ ಎಂದಿದ್ದಾರೆ.
ಜುಲೈ 5-8 ರಂದು, ಮೋದಿಯವರು ಬ್ರೆಜಿಲ್‌ಗೆ ಭೇಟಿ ನೀಡಿ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದೇನೆ. ನಮೀಬಿಯಾಕ್ಕೆ ಜುಲೈ 9 ರಂದು ಮೋದಿಯವರು ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೃಂಗಸಭೆಯಲ್ಲಿ ಭಾಗವಹಿಸದಿದ್ದರೂ, ಮೋದಿಯ ಉಪಸ್ಥಿತಿಯು ಬ್ರಿಕ್ಸ್ ವೇದಿಕೆಗೆ ಭಾರತದ ನಿರಂತರ ಬದ್ಧತೆಯನ್ನು ಸೂಚಿಸುತ್ತದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ