ಬೆಳಗಾವಿ: ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದರು. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ ಅಂತ ಕೇಳಿದ್ದಕ್ಕೆ ಸಿದ್ದರಾಮಯ್ಯ, ಅವನೊಬ್ಬ ಭೂಪ ಅವನ ಮಾತಿಗಳಿಗೆ ಮಹತ್ವ ನೀಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರರ ಮಲತಾಯಿ ಧೋರಣೆ ಬಗ್ಗೆ ಮಾತಾಡಿದ ಅವರು ರಾಜ್ಯದಿಂದ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ರೂ. 4.5 ಲಕ್ಷ ಕೋಟಿ ಹೋಗುತ್ತದೆ, ಆದರೆ ಅದರಲ್ಲಿ ರಾಜ್ಯಕ್ಕೆ ಸಿಗುತ್ತಿರೋದು ಕೇವಲ ರೂ. 50,000 ಕೋಟಿ ಮಾತ್ರ ಎಂದರು. ಬೆಳಗಾವಿಯಲ್ಲಿ ಪ್ರವಾಹ ಬಂದಾಗ ಬಂದಾಗ, ಕೊರೋನಾ ಬಂದಾಗ ವಿಚಾರಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಈಗ್ಯಾಕೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ