Siddaramaiah in border district: ಬೆಳಗಾವಿಗೆ ಪ್ರವಾಹ, ಕೊರೋನಾ ಬಂದಾಗ ಬಾರದ ಪ್ರದಾನಿ ಮೋದಿ ಈಗ್ಯಾಕೆ ಬರುತ್ತಿದ್ದಾರೆ? ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 01, 2023 | 1:14 PM

ಬೆಳಗಾವಿಯಲ್ಲಿ ಪ್ರವಾಹ ಬಂದಾಗ ಬಂದಾಗ, ಕೊರೋನಾ ಬಂದಾಗ ವಿಚಾರಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈಗ್ಯಾಕೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಬೆಳಗಾವಿ: ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದರು. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ ಅಂತ ಕೇಳಿದ್ದಕ್ಕೆ ಸಿದ್ದರಾಮಯ್ಯ, ಅವನೊಬ್ಬ ಭೂಪ ಅವನ ಮಾತಿಗಳಿಗೆ ಮಹತ್ವ ನೀಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರರ ಮಲತಾಯಿ ಧೋರಣೆ ಬಗ್ಗೆ ಮಾತಾಡಿದ ಅವರು ರಾಜ್ಯದಿಂದ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ರೂ. 4.5 ಲಕ್ಷ ಕೋಟಿ ಹೋಗುತ್ತದೆ, ಆದರೆ ಅದರಲ್ಲಿ ರಾಜ್ಯಕ್ಕೆ ಸಿಗುತ್ತಿರೋದು ಕೇವಲ ರೂ. 50,000 ಕೋಟಿ ಮಾತ್ರ ಎಂದರು. ಬೆಳಗಾವಿಯಲ್ಲಿ ಪ್ರವಾಹ ಬಂದಾಗ ಬಂದಾಗ, ಕೊರೋನಾ ಬಂದಾಗ ವಿಚಾರಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಈಗ್ಯಾಕೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 01, 2023 01:14 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.