PM Narendra Modi Karnataka Visit: ಲಿಂಗೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ ನೀಡಿ ಪ್ರಧಾನಿಗಳಿಗೆ ಸತ್ಕಾರ

|

Updated on: Feb 06, 2023 | 5:48 PM

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಕಾಯಕಯೋಗಿ ಭಾರತ ರತ್ನ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ಥಳಿಯನ್ನು ನೀಡಿ ಗೌರವಿಸಲಾಯಿತು.

ತುಮಕೂರು:  ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರು ಬಳಿಯಿರುವ ಹೆಚ್ ಎ ಎಲ್ ಹೆಲಿಕಾಪ್ಟರ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ (PM Narendra Modi) ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಕಾಯಕಯೋಗಿ ಭಾರತ ರತ್ನ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯವರ (Shivakumar Swamiji) ಪುತ್ಥಳಿಯನ್ನು ನೀಡಿ ಗೌರವಿಸಲಾಯಿತು. ಹಾಗೆಯೇ ದಾರ್ಶನಿಕರೆನಿಸಿಕೊಂಡಿರುವ ಗುಬ್ಬಿ ಚನ್ನಬಸವೇಶ್ವರ ಮತ್ತು ಗೋಡೆಕೆರೆ ಗುರು ಸಿದ್ದರಾಮೇಶ್ವರ ಅವರ ಭಾವಚಿತ್ರಗಳನ್ನು ಸಹ ಪ್ರಧಾನಿಗಳಿಗೆ ನೀಡಿ ಸತ್ಕರಿಸಲಾಯಿತು. ವೇದಿಕೆಯ ಮೇಲೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ (Rajnath Singh) ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲಾದವರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 06, 2023 05:46 PM