AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿದ ಪ್ರಧಾನಿ ಮೋದಿ; ಅಥ್ಲೀಟ್​​ಗಳಿಂದ ಜರ್ಸಿ, ಹಾಕಿ ಸ್ಟಿಕ್ ಉಡುಗೊರೆ

ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿದ ಪ್ರಧಾನಿ ಮೋದಿ; ಅಥ್ಲೀಟ್​​ಗಳಿಂದ ಜರ್ಸಿ, ಹಾಕಿ ಸ್ಟಿಕ್ ಉಡುಗೊರೆ

ಸುಷ್ಮಾ ಚಕ್ರೆ
|

Updated on: Oct 15, 2026 | 11:05 PM

Share

ಜಪಾನ್‌ನ ಐಚಿ-ನಗೋಯಾದಲ್ಲಿ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ 2026ರಲ್ಲಿ ಅದ್ಭುತ ಸಾಧನೆ ಮಾಡಿ, ದೇಶಕ್ಕೆ ಕೀರ್ತಿ ತಂದ ಭಾರತೀಯ ಅಥ್ಲೀಟ್‌ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಗುರುವಾರ) ಸನ್ಮಾನಿಸಿದ್ದಾರೆ. ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು 21 ಚಿನ್ನ, 27 ಬೆಳ್ಳಿ ಮತ್ತು 37 ಕಂಚಿನ ಪದಕಗಳು ಸೇರಿದಂತೆ ಒಟ್ಟು 85 ಪದಕಗಳನ್ನು ಗೆದ್ದಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ವಿಶೇಷ ಅಭಿನಂದನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಎಲ್ಲಾ ಕ್ರೀಡಾಪಟುಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಈ ವೇಳೆ ಅಥ್ಲೀಟ್‌ಗಳು ಪ್ರಧಾನಿಯವರಿಗೆ ಸಹಿ ಮಾಡಿದ ಜರ್ಸಿಗಳು, ಸಹಿ ಮಾಡಿದ ಹಾಕಿ ಸ್ಟಿಕ್ ಹಾಗೂ ಶಾಲು ಹೊದಿಸಿ ಗೌರವಿಸಿದರು.

ನವದೆಹಲಿ, ಅಕ್ಟೋಬರ್ 15: ಜಪಾನ್‌ನ ಐಚಿ-ನಗೋಯಾದಲ್ಲಿ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ 2026ರಲ್ಲಿ ಅದ್ಭುತ ಸಾಧನೆ ಮಾಡಿ, ದೇಶಕ್ಕೆ ಕೀರ್ತಿ ತಂದ ಭಾರತೀಯ ಅಥ್ಲೀಟ್‌ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಗುರುವಾರ) ಸನ್ಮಾನಿಸಿದ್ದಾರೆ. ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು 21 ಚಿನ್ನ, 27 ಬೆಳ್ಳಿ ಮತ್ತು 37 ಕಂಚಿನ ಪದಕಗಳು ಸೇರಿದಂತೆ ಒಟ್ಟು 85 ಪದಕಗಳನ್ನು ಗೆದ್ದಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ವಿಶೇಷ ಅಭಿನಂದನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಎಲ್ಲಾ ಕ್ರೀಡಾಪಟುಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಈ ವೇಳೆ ಅಥ್ಲೀಟ್‌ಗಳು ಪ್ರಧಾನಿಯವರಿಗೆ ಸಹಿ ಮಾಡಿದ ಜರ್ಸಿಗಳು, ಸಹಿ ಮಾಡಿದ ಹಾಕಿ ಸ್ಟಿಕ್ ಹಾಗೂ ಶಾಲು ಹೊದಿಸಿ ಗೌರವಿಸಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More