PM Modi Karnataka Visit | ಮಲ್ಲಿಕಾರ್ಜುನ ಖರ್ಗೆಯನ್ನು ಟಾರ್ಗೆಟ್ ಮಾಡುವ ಅವಶ್ಯಕತೆ ಪ್ರಧಾನಿಗಳಿಗಿಲ್ಲ: ನಳಿನ್ ಕುಮಾರ್ ಕಟೀಲು
ಹಿಂದಿನ ಕಾಂಗ್ರೆಸ್ ಸರ್ಕಾರಗಳು ಮಾಡದ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬರುತ್ತಿದ್ದಾರೆ ಎಂದು ನಳಿನ್ ಹೇಳಿದರು.
ಕಲಬುರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಟಾರ್ಗೆಟ್ ಮಾಡಲು ಕಲಬುರಗಿಗೆ ಬರುತ್ತಿಲ್ಲ, ಅದರ ಅವಶ್ಯಕತೆಯೂ ಅವರಿಗಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ ಕಟೀಲು (Nalin Kumar Kateel) ಹೇಳಿದರು. ಪ್ರಧಾನಿಗಳು ಕಲಬುರಗಿಗೆ ಆಗಮಿಸುವ ಮೊದಲು ಅಲ್ಲಿನ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತಾಡಿದ ನಳಿನ್, ಇದು ಚುನಾವಣ ಪ್ರಚಾರ ಕಾರ್ಯಕ್ರಮವಲ್ಲ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿರುವ ಸರ್ಕರೀ ಕಾರ್ಯಕ್ರಮ ಎಂದು ಹೇಳಿದರು. ಹಿಂದಿನ ಕಾಂಗ್ರೆಸ್ ಸರ್ಕಾರಗಳು ಮಾಡದ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬರುತ್ತಿದ್ದಾರೆ ಎಂದು ನಳಿನ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ