ಉಡುಪಿಯಲ್ಲಿ ನಾಳೆ ಪ್ರಧಾನಿ ಮೋದಿಯಿಂದ ಒಂದೂವರೆ ಕಿ.ಮೀ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ನಾಳೆ (ಶುಕ್ರವಾರ) ಉಡುಪಿಗೆ ಆಗಮಿಸುತ್ತಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ರದ್ದುಗೊಳಿಸಲಾಗಿತ್ತು. ಆದರೆ, ಇದೀಗ ಮತ್ತೆ ರೋಡ್ ಶೋ ಸೇರ್ಪಡೆ ಮಾಡಲಾಗಿದೆ. ಈ ಹಿಂದಿನ ವೇಳಾಪಟ್ಟಿಗಿಂತಲೂ 40 ನಿಮಿಷ ಮುಂಚೆ ಉಡುಪಿಗೆ ಮೋದಿ ಭೇಟಿ ನೀಡಲಿದ್ದಾರೆ. ಮಠಕ್ಕೆ ತೆರಳುವ ಮುನ್ನ ಅವರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ, ನವೆಂಬರ್ 27: ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ನವೆಂಬರ್ 28) ಉಡುಪಿಗೆ ಆಗಮಿಸಲಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಲ್ಲಿ ಅವರ ರೋಡ್ ಶೋ ಇರುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, ನಾಳೆ 40 ನಿಮಿಷ ಮುಂಚಿತವಾಗಿ ಉಡುಪಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಬೆಳಗ್ಗೆ ಒಂದೂವರೆ ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ವೀಕ್ಷಿಸಲು ಆಗಮಿಸುವವರು 9.30ರೊಳಗೆ ಆಗಮಿಸಬೇಕೆಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಕಾರ್ಕಳ ಮನವಿ ಮಾಡಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಯಿಂದ 11.30ರವರೆಗೆ ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಬನ್ನಂಜೆಯಿಂದ ಕಲ್ಸಂಕ ತನಕ ಕಾರಿನಲ್ಲಿ ಜನರತ್ತ ಕೈ ಬೀಸುತ್ತಾ ಮೋದಿ ರೋಡ್ ಶೋ ನಡೆಸಲಿದ್ದಾರೆ. ಆ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಉಡುಪಿಯಿಂದ ಪ್ರಧಾನಿ ಮೋದಿ ತೆರಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

