PM Modi in Rajasthan: ರಾಜಸ್ಥಾನದಲ್ಲಿ ರೂ 5,500 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

PM Modi in Rajasthan: ರಾಜಸ್ಥಾನದಲ್ಲಿ ರೂ 5,500 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ಅರುಣ್​ ಕುಮಾರ್​ ಬೆಳ್ಳಿ
|

Updated on: May 10, 2023 | 3:02 PM

ಸಹಸ್ರಾರು ಜನ ನಗರದ ರಸ್ತೆಗಳ ಇಕ್ಕೆಲಗಳಲ್ಲಿ ನಿಂತು ಮೋದಿಯವರ ಕಾರಿನ ಮೇಲೆ ಪುಷ್ಪಾರ್ಚನೆ ಮಾಡುತ್ತಾ ಸ್ವಾಗತಿಸಿದರು

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು ರಾಜಸ್ಥಾನದಲ್ಲಿ ರೂ. 5, 500 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು (development projects) ಉದ್ಘಾಟಿಸಿದರು. ನಂತರ ಪ್ರಧಾನಿ ಮೋದಿ, ಬಿಜೆಪಿ ರಾಜಸ್ಥಾನ ಘಟಕ ನಥ್ವಾರಾದಲ್ಲಿ ಆಯೋಜಿಸಿದ ಭಾರೀ ರೋಡ್ ಶೋನಲ್ಲಿ ಪಾಲ್ಗೊಂಡರು. ಸಹಸ್ರಾರು ಜನ ನಗರದ ರಸ್ತೆಗಳ ಇಕ್ಕೆಲಗಳಲ್ಲಿ ನಿಂತು ಮೋದಿಯವರ ಕಾರಿನ ಮೇಲೆ ಪುಷ್ಪಾರ್ಚನೆ ಮಾಡುತ್ತಾ ಸ್ವಾಗತಿಸಿದರು. ಆಮೇಲೆ ಒಂದು ಬೃಹತ್ ಸಭೆಯನ್ನುದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, ‘ಸುಮಾರು 5,550 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ, ಈ ಅಭಿವೃದ್ಧಿ ಯೋಜನೆಗಳಿಗಾಗಿ ನಾನು ರಾಜಸ್ಥಾನದ ಜನತೆಯನ್ನು ಅಭಿನಂದಿಸುತ್ತೇನೆ. ರಾಜಸ್ಥಾನಕ್ಕೆ ಆಧುನಿಕ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ,’ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ